ಸೋಮವಾರ, ಜೂನ್ 16, 2025
HomeCorona UpdatesHostel Guidelines :ಹಾಸ್ಟೆಲ್​ಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ : ಶಾಲಾ-ಕಾಲೇಜು ಬಂದ್​ ವಿಚಾರದಲ್ಲಿಯೂ...

Hostel Guidelines :ಹಾಸ್ಟೆಲ್​ಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ : ಶಾಲಾ-ಕಾಲೇಜು ಬಂದ್​ ವಿಚಾರದಲ್ಲಿಯೂ ಮಹತ್ವದ ಹೇಳಿಕೆ

- Advertisement -

ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೇಲ್​ಗಳಿಗೆ (Hostel Guidelines) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಮಾರ್ಗಸೂಚಿಯನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಕೆಲ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮೂಹಿಕವಾಗಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಒಮಿಕ್ರಾನ್​ ವಿಚಾರದಲ್ಲಿ ಗಾಬರಿ ಪಡುವ ಅಗತ್ಯವಿಲ್ಲ. ಸಂಪುಟ ಸಭೆಯಲ್ಲಿ ಹಾಸ್ಟೆಲ್​ಗಳಲ್ಲಿ ಕೋವಿಡ್​ ಮಾರ್ಗಸೂಚಿಗಳನ್ನು ಜಾರಿಗೆ ತರುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

ರಾಜ್ಯ ಸರ್ಕಾರದ ನಿರ್ದೇಶನದಂತೆ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿ ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಊಟ ಮಾಡುವ ವೇಳೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಅಂತರ (Hostel Guidelines) ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಊಟ ಮಾಡಲು ಹಾಸ್ಟೆಲ್​ಗಳಲ್ಲಿ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಹಾಸ್ಟೆಲ್​​ಗೆ ಹೊಸಬರು ಪ್ರವೇಶಿಸುವಂತಿಲ್ಲ ಹಾಗೂ ಹಾಸ್ಟೆಲ್​ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಸಂಪೂರ್ಣ ಕೋವಿಡ್​ ಲಸಿಕೆಯನ್ನು ಸ್ವೀಕರಿಸುವುದು ಕಡ್ಡಾಯವಾಗಿದೆ

.ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್​ ಮಾಡುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್​ಮ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಮೌಂಟ್​ ಕಾರ್ಮಲ್​ ಕಾಲೇಜಿನಲ್ಲಿ ಮಾತ್ರ ಪಾಸಿಟಿವ್​ ಕೇಸ್​ಗಳು ವರದಿಯಾಗಿದೆ. ವಿದ್ಯಾರ್ಥಿಗಳ ಆರೋಗ್ಯವು ಸ್ಥಿರವಾಗಿಯೇ ಇದೆ. ರಾಜ್ಯದಲ್ಲಿ ಈವರೆಗೆ 172 ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದು 100 ಮಂದಿ ಗುಣಮುಖರಾಗಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಬಂದ್​ ಮಾಡುವಂತಹ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದಾರೆ.

ಭದ್ರಾವತಿಯಲ್ಲಿ 24 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ

ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಅದ್ರಲ್ಲೂ ಕಾಲೇಜುಗಳಲ್ಲಿ ಕೊರೊನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 24 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲೀಗ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದೆ.

ಭದ್ರಾವತಿಯ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಬಂದಿದ್ದರು. ಪರೀಕ್ಷೆ ಬರೆದು ವಾಪಾಸಾದ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿದಾಗ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಇದೀಗ ಕಾಲೇಜಿನ ೨೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಕಾಲೇಜು ಹಾಗೂ ವಿದ್ಯಾರ್ಥಿಗಳ ಹಾಸ್ಟೆಲ್‌ನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ತಿಳಿಸಿದ್ದಾರೆ. ಇದೀಗ ಕಾಲೇಜಿನ ಸಿಬ್ಬಂದಿಗಳನ್ನೂ ಕೂಡ ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ನರ್ಸಿಂಗ್‌ ಕಾಲೇಜನ್ನು ಸೀಲ್‌ಡೌನ್‌ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್‌ಗೆ ಒಳಪಡಿಸ ಲಾಗಿದ್ದು, ಕೊರೊನಾ ಸೋಂಕಿತರ ಜೊತೆ ಸಂಪರ್ಕ ಹೊಂದಿರುವ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಲಾಗಿದೆ.

ಇದನ್ನೂ ಓದಿ : Egg Controversy : ಬೊಮ್ಮಾಯಿಗೆ ಮೊಟ್ಟೆ ಸಂಕಟ: ಲಿಂಗಾಯತರಿಂದಲೇ ಸರ್ಕಾರ ಪತನ ಎಂದ ಸ್ವಾಮೀಜಿ

ಇದನ್ನೂ ಓದಿ : Omicron School Collage Close : ವಾರದಲ್ಲೇ ಬಂದ್ ಆಗುತ್ತಾ ಶಾಲಾ ಕಾಲೇಜು? ಶಿಕ್ಷಣ ಸಚಿವರ ಖಡಕ್ ನಿರ್ಧಾರವೇನು ಗೊತ್ತಾ?!

The state government has issued for Hostel Guidelines 

RELATED ARTICLES

Most Popular