ಉಡುಪಿ : ಇಬ್ಬರು ವೈದ್ಯರು ಹಾಗೂ 4 ಮಂದಿ ಆರೋಗ್ಯ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಜಿಲ್ಲಾಸ್ಪತ್ರೆಯ ತುರ್ತು ಸೇವೆ ಹಾಗೂ ಕೊರೊನಾ ಫೀವರ್ ಕ್ಲಿನಿಕ್ ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತ ಗೊಳಿಸಲಾಗಿದೆ. ಆಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚಲಾಗುತ್ತಿದೆ.

ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿ ಮುಚ್ಚಲಾಗಿದ್ದು, ಮೂರು ದಿನಗಳ ನಂತರ ಆಸ್ಪತ್ರೆ ಸಾರ್ವಜನಿಕರ ಆರೊಗ್ಯ ಸೇವೆಗೆ ಲಭ್ಯವಾಗಲಿದೆ ಎಂದು ಜಿಲ್ಲಾ ಸರ್ಜನ್ ತಿಳಿಸಿದ್ದಾರೆ.