Vaccine compulsory: ಬಾರ್‌, ಪಬ್‌ ಗೆ ಹೋಗುವ ಮುನ್ನ ಹುಷಾರ್ !‌ 2 ಡೋಸ್‌ ಕೋವಿಡ್ ಲಸಿಕೆ ಕಡ್ಡಾಯ

ಬೆಂಗಳೂರು: (Vaccine compulsory) ಕೋವಿಡ್ ವೈರಸ್ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಠಿಣ ರೂಲ್ಸ್ ಗಳನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಶಾಲೆ, ಕಾಲೇಜು, ಸಿನಿಮಾ ಮಂದಿರಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಹೊಸ ವರ್ಷಾಚರಣೆಗೆ ಪ್ರತ್ಯೇಕ ರೂಲ್ಸ್ ಜಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಅಲ್ಲದೇ ಬಾರ್‌ ಪಬ್‌ ಗಳಲ್ಲಿ ಕೆಲಸ ಮಾಡುವವರಿಗೆ ಹಾಗೂ ಗ್ರಾಹಕರಿಗೆ ಕೊರೊನಾ ಲಸಿಕೆ ಕಡ್ಡಾಯವಾಗಿರಬೇಕು ಎಂದು ಸಚಿವರು ತಿಳಿಸಿದ್ದಾರೆ.

ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಹೊಸ ರೂಲ್ಸ್‌ (Vaccine compulsory) ಗಳನ್ನು ಜಾರಿ ಮಾಡಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಬಾರ್‌ ಆಂಡ್‌ ರೆಸ್ಟೋರೆಂಟ್‌ ಕೂಡ ಒಂದು. ಸಾಕಷ್ಟು ಮಂದಿ ಬಾರ್‌ ಗೆ ಹೋಗುವ ಕಾರಣ ಬಾರ್‌ ಗ್ರಾಹಕರಿಗೂ ಕೂಡ ಆರೋಗ್ಯ ಇಲಾಖೆ ಕೊರೊನಾ ನಿಯಮಗಳನ್ನು ಕಡ್ಡಾಯ ಮಾಡಿದೆ. ಬಾರ್‌ ಮಾಲೀಕರು ಹಾಗೂ ಬಾರ್‌ ಗ್ರಾಹಕರಿಗೆ ಎರಡು ಡೋಸ್‌ ಕೊರೊನಾ ಲಸಿಕೆ ಕಡ್ಡಾಯ. ಒಂದು ವೇಳೆ ಗ್ರಾಹಕರು ಎರಡು ಡೋಸ್‌ ಲಸಿಕೆಗಳನ್ನು ಪಡೆದುಕೊಳ್ಳದೇ ಇದ್ದಲ್ಲಿ ಬಾರ್‌ ಗೆ ಪ್ರವೇಶಿಸುವಂತಿಲ್ಲ.

ಕೋವಿಡ್ ಸೋಂಕು ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಇನ್ನು ಬಾರ್, ಪಬ್ ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಹಾಗೂ ಗ್ರಾಹಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ತೆಗೆದುಕೊಂಡಿರಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಯಿತು. ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ನಿಯಮಗಳನ್ನು ಜಾರಿಗೆ ತರಲಾಗಿದೆ. ರಾಜ್ಯದ ಶಾಲೆ, ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.ಶಾಲಾ ಕೊಠಡಿ ಪ್ರವೇಶಿಸುವುದಕ್ಕೂ ಮೊದಲು ಹ್ಯಾಂಡ್‌ ಸ್ಯಾನಿಟೈಜ್‌ ಹಾಕಿಕೊಂಡು ಮಾಸ್ಕ್‌ ಕಡ್ಡಾಯವಾಗಿ ಧರಿಸಿ ಒಳಗಡೆ ಹೋಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ : Covid rules enforced: ಶಾಲೆ, ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ, ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ : ಕೋವಿಡ್ ನಿಯಂತ್ರಣಕ್ಕೆ ಹೊಸ ರೂಲ್ಸ್ ಜಾರಿ

ಇದನ್ನೂ ಓದಿ : BF.7 virus in bengaluru: ಬೆಂಗಳೂರಿನಲ್ಲೂ ಕಾಲಿಟ್ಟ BF.7 ಚೀನಾ ವೈರಸ್?‌ ಚೀನಾದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ದೃಡ

(Vaccine Compulsory) Strict rules have been implemented in Karnataka in the wake of the fear of the spread of Covid virus infection. Masks have been made mandatory in schools, colleges and cinema halls in Karnataka. Also, Revenue Minister R. Ashok said that separate rules have been implemented for the New Year celebrations

Comments are closed.