Weekend curfew rules :ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕೋವಿಡ್ ಸೋಂಕು ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋದರಿಂದ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಆದೇಶಗಳನ್ನು ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಗೆ ಆರಂಭವಾಗಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಇರಲಿದೆ.
ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಹಾಗಾದರೆ ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಯಾವೆಲ್ಲ ಸೇವೆಗಳಿಗೆ ನಿರ್ಬಂಧವಿದೆ. ಹಾಗೂ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶವಿದೆ ಎಂಬುದಕ್ಕೆ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ :
- ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳು, ತುರ್ತು ಸೇವೆಗಳು , ಕೊರೊನಾ ನಿರ್ವಹಣೆಗೆ ಸಂಬಂಧಿಸಿದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸಲಿವೆ.
- ಐಟಿ ಹಾಗೂ ಕೈಗಾರಿಕಾ ವಲಯಗಳಿಗೆ ಕರ್ಫ್ಯೂ ಅವಧಿಯಲ್ಲಿ ನಿರ್ಬಂಧ ಇರುವುದಿಲ್ಲ. ಕಂಪನಿಯ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ.
- ರೋಗಿಗಳು ಹಾಗೂ ಅವರ ಸಂಬಂಧಿಗಳು, ಲಸಿಕೆ ತೆಗೆದುಕೊಳ್ಳುವವರು ತುರ್ತು ಸೇವೆಗಳ ಅಗತ್ಯ ಇರುವವರು ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಓಡಾಟ ನಡೆಸಬಹುದಾಗಿದೆ.
- ಹಣ್ಣು ಹಾಗೂ ತರಕಾರಿ ಅಂಗಡಿ, ಡೈರಿ ಉತ್ಪನ್ನಗಳು, ದಿನಸಿ ಅಂಗಡಿಗಳು,ಮೀನು ಹಾಗೂ ಮಾಂಸದ ಅಂಗಡಿ, ಪ್ರಾಣಿಗಳಿಗೆ ಸಂಬಂಧಿಸಿದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
- ಬೀದಿ ಬದಿ ವ್ಯಾಪಾರಿಗಳೂ ಎಂದಿನಂತೆ ವ್ಯಾಪಾರ ವ್ಯವಹಾರ ನಡೆಸಬಹುದು. ನ್ಯಾಯಬೆಲೆ ಅಂಗಡಿಗಳೂ ಈ ಅವಧಿಯಲ್ಲಿ ತೆರೆಯಲಿವೆ.
- ಹೋಂ ಡೆಲಿವರಿ ಪಡೆಯುವವರಿಗೆ ಮುಕ್ತ ಅವಕಾಶ ಇರಲಿದೆ. ರೆಸ್ಟಾರೆಂಟ್ ಹಾಗೂ ಹೋಟೆಲ್ಗಳಲ್ಲಿ ಪಾರ್ಸಲ್ ಮಾತ್ರ ಪಡೆಯಬಹುದು.
- ವಿರಳ ಸಂಖ್ಯೆಯಲ್ಲಿ ಬಸ್ ಸೇವೆ, ರೈಲು ಸೇವೆ ಹಾಗೂ ವಿಮಾನ ಸೇವೆ ಕೂಡ ಇರಲಿದೆ. ಖಾಸಗಿ ವಾಹನಗಳು ಹಾಗೂ ಟ್ಯಾಕ್ಸಿಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ.
- ಪ್ರಯಾಣಿಕರು ತಮ್ಮ ಟಿಕೆಟ್ನ್ನು ತೋರಿಸುವ ಮೂಲಕ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ ಸಂಚರಿಸಬಹುದಾಗಿದೆ.
- ಮೆಟ್ರೋ ಪ್ರಯಾಣದ ಸಮಯದಲ್ಲಿ ಪರಿಷ್ಕರಣೆ ಮಾಡಲಾಗುವುದು.
- ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮದುವೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಚರಿಸಲು ಅನುಮತಿ ನೀಡಲಾಗಿದೆ.
- ಸಾರ್ವಜನಿಕ ಉದ್ಯಾನವಗಳು ಬಂದ್ ಇರಲಿವೆ.
ಇದನ್ನು ಓದಿ : ಸರಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಾತಿ : ವಿಕಲಚೇತನರು, ಗರ್ಭಿಣಿಯರಿಗೆ Work From Home
ಇದನ್ನೂ ಓದಿ : Covid-19 Updates : ಕರ್ನಾಟಕದಲ್ಲಿಂದು 4,246 ಕೊರೊನಾ ಪ್ರಕರಣ : ಬೆಂಗಳೂರು, ದ.ಕ., ಉಡುಪಿಯಲ್ಲಿ ಕೊರೊನಾ ಸ್ಪೋಟ
weekend curfew rules and regulations in karnataka