Weekend curfew rules : ರಾಜ್ಯದಲ್ಲಿ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಏನಿರುತ್ತೆ, ಏನಿರಲ್ಲ: ಇಲ್ಲಿದೆ ಮಾಹಿತಿ

Weekend curfew rules :ರಾಜ್ಯದಲ್ಲಿ ಓಮಿಕ್ರಾನ್​ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕೋವಿಡ್​ ಸೋಂಕು ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋದರಿಂದ ರಾಜ್ಯ ಸರ್ಕಾರ ನೈಟ್​ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಆದೇಶಗಳನ್ನು ಹೊರಡಿಸಿದೆ. ಶುಕ್ರವಾರ ರಾತ್ರಿ 10 ಗಂಟೆಗೆ ಆರಂಭವಾಗಲಿರುವ ವೀಕೆಂಡ್​ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ಇರಲಿದೆ.


ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಹಾಗಾದರೆ ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಯಾವೆಲ್ಲ ಸೇವೆಗಳಿಗೆ ನಿರ್ಬಂಧವಿದೆ. ಹಾಗೂ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶವಿದೆ ಎಂಬುದಕ್ಕೆ ಸಂಕ್ಷಿಪ್ತ ವಿವರ ಇಲ್ಲಿದೆ ನೋಡಿ :

  • ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಅಗತ್ಯ ಸೇವೆಗಳು, ತುರ್ತು ಸೇವೆಗಳು , ಕೊರೊನಾ ನಿರ್ವಹಣೆಗೆ ಸಂಬಂಧಿಸಿದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು ಕಾರ್ಯನಿರ್ವಹಿಸಲಿವೆ.
  • ಐಟಿ ಹಾಗೂ ಕೈಗಾರಿಕಾ ವಲಯಗಳಿಗೆ ಕರ್ಫ್ಯೂ ಅವಧಿಯಲ್ಲಿ ನಿರ್ಬಂಧ ಇರುವುದಿಲ್ಲ. ಕಂಪನಿಯ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗಬಹುದಾಗಿದೆ.
  • ರೋಗಿಗಳು ಹಾಗೂ ಅವರ ಸಂಬಂಧಿಗಳು, ಲಸಿಕೆ ತೆಗೆದುಕೊಳ್ಳುವವರು ತುರ್ತು ಸೇವೆಗಳ ಅಗತ್ಯ ಇರುವವರು ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಓಡಾಟ ನಡೆಸಬಹುದಾಗಿದೆ.
  • ಹಣ್ಣು ಹಾಗೂ ತರಕಾರಿ ಅಂಗಡಿ, ಡೈರಿ ಉತ್ಪನ್ನಗಳು, ದಿನಸಿ ಅಂಗಡಿಗಳು,ಮೀನು ಹಾಗೂ ಮಾಂಸದ ಅಂಗಡಿ, ಪ್ರಾಣಿಗಳಿಗೆ ಸಂಬಂಧಿಸಿದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.
  • ಬೀದಿ ಬದಿ ವ್ಯಾಪಾರಿಗಳೂ ಎಂದಿನಂತೆ ವ್ಯಾಪಾರ ವ್ಯವಹಾರ ನಡೆಸಬಹುದು. ನ್ಯಾಯಬೆಲೆ ಅಂಗಡಿಗಳೂ ಈ ಅವಧಿಯಲ್ಲಿ ತೆರೆಯಲಿವೆ.
  • ಹೋಂ ಡೆಲಿವರಿ ಪಡೆಯುವವರಿಗೆ ಮುಕ್ತ ಅವಕಾಶ ಇರಲಿದೆ. ರೆಸ್ಟಾರೆಂಟ್​ ಹಾಗೂ ಹೋಟೆಲ್​ಗಳಲ್ಲಿ ಪಾರ್ಸಲ್​ ಮಾತ್ರ ಪಡೆಯಬಹುದು.
  • ವಿರಳ ಸಂಖ್ಯೆಯಲ್ಲಿ ಬಸ್​ ಸೇವೆ, ರೈಲು ಸೇವೆ ಹಾಗೂ ವಿಮಾನ ಸೇವೆ ಕೂಡ ಇರಲಿದೆ. ಖಾಸಗಿ ವಾಹನಗಳು ಹಾಗೂ ಟ್ಯಾಕ್ಸಿಗಳ ಓಡಾಟಕ್ಕೂ ಅವಕಾಶ ನೀಡಲಾಗಿದೆ.
  • ಪ್ರಯಾಣಿಕರು ತಮ್ಮ ಟಿಕೆಟ್​ನ್ನು ತೋರಿಸುವ ಮೂಲಕ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್​ ನಿಲ್ದಾಣಗಳಿಗೆ ಸಂಚರಿಸಬಹುದಾಗಿದೆ.
  • ಮೆಟ್ರೋ ಪ್ರಯಾಣದ ಸಮಯದಲ್ಲಿ ಪರಿಷ್ಕರಣೆ ಮಾಡಲಾಗುವುದು.
  • ವೀಕೆಂಡ್​ ಕರ್ಫ್ಯೂ ಅವಧಿಯಲ್ಲಿ ಮದುವೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳನ್ನು ಆಚರಿಸಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ ಉದ್ಯಾನವಗಳು ಬಂದ್​ ಇರಲಿವೆ.

ಇದನ್ನು ಓದಿ : ಸರಕಾರಿ ಕಚೇರಿಗಳಲ್ಲಿ ಶೇ.50ರಷ್ಟು ಹಾಜರಾತಿ : ವಿಕಲಚೇತನರು, ಗರ್ಭಿಣಿಯರಿಗೆ Work From Home

ಇದನ್ನೂ ಓದಿ : Covid-19 Updates : ಕರ್ನಾಟಕದಲ್ಲಿಂದು 4,246 ಕೊರೊನಾ ಪ್ರಕರಣ : ಬೆಂಗಳೂರು, ದ.ಕ., ಉಡುಪಿಯಲ್ಲಿ ಕೊರೊನಾ ಸ್ಪೋಟ

weekend curfew rules and regulations in karnataka

Comments are closed.