ಇಡೀ ವಿಶ್ವದಲ್ಲಿ ಇದೀಗ ಓಮಿಕ್ರಾನ್ ರೂಪಾಂತರಿಯ ಭಯ ಮನೆ ಮಾಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ದೇಶಗಳಿಗೆ ಅನೇಕ ರಾಷ್ಟ್ರಗಳು ಅಂತಾರಾಷ್ಟ್ರೀಯ ಪ್ರಯಾಣವನ್ನೇ ನಿರ್ಬಂಧಿಸಿವೆ. ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದವರಿಗೆ ಹೋಂ ಕ್ವಾರಂಟೈನ್ನಲ್ಲಿರೋದು (Home Quarantine) ಕಡ್ಡಾಯವಾಗಿದೆ. ಆದರೆ ದಕ್ಷಿಣ ಆಫ್ರಿಕಾದಿಂದ ಚಂಡೀಗಢಕ್ಕೆ ಮರಳಿದ್ದ ಮಹಿಳೆ ಮಾತ್ರ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಮರಳಿದ್ದ ಮಹಿಳೆಗೆ ಕಡ್ಡಾಯ ಹೋಂ ಕ್ವಾರಂಟೈನ್ನಲ್ಲಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದರು. ಆದರೆ ಹೋಂ ಕ್ವಾರಂಟೈನ್ಗೆ ಒಳಗಾದ ಮಾರನೇ ದಿನವೇ ಫೈವ್ ಸ್ಟಾರ್ ಹೋಟೆಲ್ಗೆ ತೆರಳಿದ್ದಾರೆ. ಡಿಸೆಂಬರ್ 1ರಂದು ಮಹಿಳೆಯನ್ನು ಕಡ್ಡಾಯ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಆದರೆ ಡಿಸೆಂಬರ್ 2 ರಂದೇ ಮಹಿಳೆಯು ಸಂಜೆ ಸುಮಾರಿಗೆ ಫೈವ್ ಸ್ಟಾರ್ ಹೋಟೆಲ್ಗೆ ತೆರಳಿದ್ದಾರೆ. ಅಂದಹಾಗೆ ಮಹಿಳೆಯ ಕೊರೊನಾ ವರದಿಯು ಈವರೆಗೆ ನೆಗೆಟಿವ್ ಆಗಿದೆ. ಆದರೂ ಸಹ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕ್ವಾರಂಟೈನ್ ಕಡ್ಡಾಯವಾಗಿದೆ.
ಹೋಂ ಕ್ವಾರಂಟೈನ್ ಉಲ್ಲಂಘನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು ಹೋಟೆಲ್ನ ಎಲ್ಲಾ ಸಿಬ್ಬಂದಿಗೆ ಆರ್ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಮಹಿಳೆಯ ವಿರುದ್ಧ ಯಾವೆಲ್ಲ ರೀತಿಯ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ.
ದೇಶದಲ್ಲಿ ನಾಲ್ಕು ಓಮಿಕ್ರಾನ್ ಕೇಸ್ ಪತ್ತೆ
ಗುಜರಾತ್, ಮಹಾರಾಷ್ಟ್ರದಲ್ಲಿ ಓಮಿಕ್ರಾನ್ನ (OMICRON) ಮೊದಲ ಪ್ರಕರಣ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಓಮಿಕ್ರಾನ್ ಸೋಂಕಿಗೆ ಒಳಗಾದವರ ಸಂಖ್ಯೆ ನಾಲ್ಕಕ್ಕೆ ತಲುಪಿದೆ.
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಪ್ರಕರಣ ವರದಿಯಾಗಿತ್ತು. ದಕ್ಷಿಣ ಆಫ್ರಿಕಾದಿಂದ ನೆಗೆಟಿವ್ ವರದಿಯೊಂದಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಪ್ರಯೋಗಾಲಯದಲ್ಲಿ ಇವರ ಸೋಂಕಿನ ವರದಿ ಕಳುಹಿಸಿದ ಬಳಿಕ ಓಮಿಕ್ರಾನ್ ರೂಪಾಂತರಿ ಇರೋದು ಪತ್ತೆಯಾಗಿದೆ. ಮತ್ತೊಂದು ಪ್ರಕರಣದಲ್ಲಿ ಯಾವುದೇ ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯನ್ನು ಹೊಂದಿರದ ವೈದ್ಯರೊಬ್ಬರಿಗೂ ಕೂಡ ಓಮಿಕ್ರಾನ್ ರೂಪಾಂತರಿ ಕಾಣಿಸಿಕೊಂಡಿದೆ.
ಇಂದು ಮಧ್ಯಾಹ್ನ ಗುಜರಾತ್ನಲ್ಲಿ ಮೊಟ್ಟ ಮೊದಲ ಓಮಿಕ್ರಾನ್ ರೂಪಾಂತರಿ ಪ್ರಕರಣ ವರದಿಯಾಗಿದೆ. ಜಿಂಬಾಬ್ವೆಯಿಂದ ಮರಳಿದ್ದ 72 ವರ್ಷದ ವೃದ್ಧನಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ವ್ಯಕ್ತಿಯು ಗುಜರಾತ್ನ ಜಾಮ್ ನಗರದ ನಿವಾಸಿಯಾಗಿದ್ದಾರೆ. ಇವರಿಗೆ ಬುಧವಾರ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಪ್ರಯೋಗಾಲಯಕ್ಕೆ ವರದಿಯನ್ನು ಕಳುಹಿಸಿಕೊಡಲಾಗಿತ್ತು. ಸಾಕಷ್ಟು ಪರೀಕ್ಷೆಗಳ ಬಳಿಕ ಈ ವ್ಯಕ್ತಿಗೂ ಓಮಿಕ್ರಾನ್ ಇರುವುದು ದೃಢಪಟ್ಟಿದೆ.
ಇದನ್ನು ಓದಿ : Indian Navy Day 2021 : ಭಾರತೀಯ ನೌಕಾ ಸೇನಾ ದಿನಕ್ಕೆ 50 ವರ್ಷದ ಸಂಭ್ರಮ: ಇಲ್ಲಿದೆ ನೋಡಿ ನೌಕಾ ದಿನದ ಇತಿಹಾಸ ಹಾಗೂ ಮಹತ್ವ
Woman Who Returned from SA to Chandigarh Jumps Home Quarantine, Goes to 5-star Hotel