ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ನಡೆಯಲಿದ್ಯಾ ಐಪಿಎಲ್ ಪಂದ್ಯಾವಳಿ : ಕೆಎಸ್ಸಿಎನಿಂದ ಮಹತ್ವದ ಮಾಹಿತಿ
ಆರ್ಸಿಬಿ ವಿಜಯೋತ್ಸವದ ದುರಂತದ ಬಳಿಕ ಶಾಪಗ್ರಸ್ತವಾಗಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಐಪಿಎಲ್ ಪಂದ್ಯ ನಡೆಯುವ ಕನಸು ಮತ್ತೊಮ್ಮೆ ಚಿಗುರೊಡೆದಿದೆ. ಈ ವಿಚಾರವಾಗಿ ಮಾತನಾಡಿರುವ KSCA ವಕ್ತಾರ ವಿನಯ್ ಮೃತ್ಯುಂಜಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಮಾರ್ಗಸೂಚಿಯಲ್ಲಿರುವ ಎಲ್ಲಾ ಷರತ್ತುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದ್ದು ಶೀಘ್ರದಲ್ಲೇ ಅನುಮತಿ ಸಿಗಲಿದೆ ಎಂದಿದ್ದಾರೆ.
ಕೆಎಸ್‌ಸಿಎ ಜೊತೆಗೆ ಬೆಂಗಳೂರು ನಗರ ಪೊಲೀಸರು ಸಭೆ ನಡೆಸಿದ್ದು… ಸಭೆಯಲ್ಲಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಎಂ ಹಾಕೆ, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಲವರು ಪಾಲ್ಗೊಂಡಿದ್ದರು. ಸಭೆಯ ಬಳಿಕ ವಿನಯ್ ಮೃತ್ಯುಂಜಯ ಮಾತನಾಡಿದ್ದಾರೆ.
ಇದನ್ನೂ ಓದಿ: ನಿವೃತ್ತಿ ಘೋಷಿಸಿದ ಭಾರತೀಯ ಕ್ರಿಕೆಟ್‌ಗ; ಎಬಿ ಡಿವಿಲಿಯರ್ಸ್ ವಿಕೆಟ್ ಪಡೆದಿದ್ದ ‘ಮಿಸ್ಟ್ರಿ ಸ್ಪಿನ್ನರ್’ ವಿದಾಯ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸುವ ಕುರಿತು ಚರ್ಚಿಸಲು ಗೃಹ ಮಂತ್ರಿಗಳು ಒಂದು ಸಮಿತಿ ರಚನೆ ಮಾಡಿದ್ದಾರೆ. ಕ್ರಿಕೆಟ್ ಪಂದ್ಯಕ್ಕೂ ಮುನ್ನ ಈ ಸಮಿತಿ ಮೈದಾನ ಪರಿಶೀಲನೆ ಮಾಡಬೇಕು. ಹೀಗಾಗಿಯೇ ನಾವು ಕಮಿಟಿ ನೀಡಿರುವ ಮಾರ್ಗಸೂಚಿಯನ್ನು ಆಧರಿಸಿ ಚರ್ಚೆ ನಡೆಸಿದ್ದೇವೆ. ಕಮಿಟಿ ನೀಡಿರುವ ಎಲ್ಲಾ ಮಾನದಂಡಗಳನ್ನು ಪಾಲಿಸಿದ ಬಳಿಕ ನಮಗೆ ಪಂದ್ಯ ನಡೆಸಲು ಅನುಮತಿ ದೊರಕಲಿದೆ. ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸುವ ದೃಷ್ಠಿಯಿಂದ ಎಲ್ಲಾ ರೀತಿಯ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ ಎಂದು ವಿನಯ್ ಮೃತ್ಯುಂಜಯ ಹೇಳಿದ್ದಾರೆ .



