ಇಂದು ರೋಚಕ ಐಪಿಎಲ್ ಅಂತಿಮ : ಕದನ ಸತತ 2ನೇ ಟ್ರೋಫಿ ಮೇಲೆ ಆರ್ಸಿಬಿ ಕಣ್ಣು
ಕ್ರಿಕೆಟ್ ಜಗತ್ತಿನ ಅತ್ಯಂತ ದೊಡ್ಡ ಹಬ್ಬವಾದ ಐಪಿಎಲ್ 19ನೇ ಆವೃತ್ತಿಯ ಚಾಂಪಿಯನ್ ಪ್ರಶಸ್ತಿಗಾಗಿ ಇಂದು ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭರ್ಜರಿ ಫೈನಲ್ ಪಂದ್ಯ ನಡೆಯಲಿದೆ. ಇಂದಿನ ಮಹಾಕದನದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಹಾಗೂ ಮಾಜಿ ವಿಜೇತ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳ ಕಣ್ಣು ಈ ಪಂದ್ಯದ ಮೇಲಿದೆ.
ಕ್ರಿಕೆಟ್ ಜಗತ್ತಿನ ಅತ್ಯಂತ ದೊಡ್ಡ ಹಬ್ಬವಾದ ಐಪಿಎಲ್ 19ನೇ ಆವೃತ್ತಿಯ ಚಾಂಪಿಯನ್ ಪ್ರಶಸ್ತಿಗಾಗಿ ಇಂದು ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭರ್ಜರಿ ಫೈನಲ್ ಪಂದ್ಯ ನಡೆಯಲಿದೆ. ಇಂದಿನ ಮಹಾಕದನದಲ್ಲಿ ಹಾಲಿ ಚಾಂಪಿಯನ್ ಬೆಂಗಳೂರು ಹಾಗೂ ಮಾಜಿ ವಿಜೇತ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಇಡೀ ವಿಶ್ವದ ಕ್ರಿಕೆಟ್ ಪ್ರೇಮಿಗಳ ಕಣ್ಣು ಈ ಪಂದ್ಯದ ಮೇಲಿದೆ.
ಚೊಚ್ಚಲ ಐಪಿಎಲ್ ಟ್ರೋಫಿಗಾಗಿ ಬರೋಬ್ಬರಿ 18 ವರ್ಷಗಳ ಕಾಲ ಸುದೀರ್ಘ ಕಾಯುವಿಕೆ ನಡೆಸಿದ್ದ ಬೆಂಗಳೂರು ತಂಡಕ್ಕೆ, ಈಗ ಸತತ ಎರಡನೇ ವರ್ಷವೂ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸುವರ್ಣ ಅವಕಾಶ ಎದುರಾಗಿದೆ. ಟೂರ್ನಿಯುದ್ದಕ್ಕೂ ಸಾಂಘಿಕ ಮತ್ತು ಅದ್ಭುತ ಪ್ರದರ್ಶನ ತೋರಿದ್ದ ಆರ್ಸಿಬಿ, ಲೀಗ್ ಹಂತ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಪ್ಲೇ-ಆಫ್ ಪ್ರವೇಶಿಸಿತ್ತು. ಅಷ್ಟೇ ಅಲ್ಲದೆ, ಕ್ವಾಲಿಫೈಯರ್-1 ಪಂದ್ಯದಲ್ಲಿ ಇದೇ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ನೇರವಾಗಿ ಫೈನಲ್ಗೆ ಲಗ್ಗೆ ಇಟ್ಟಿತ್ತು.
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡವು ಸಹ ಅತ್ಯಂತ ಬಲಿಷ್ಠವಾಗಿ ಗುರುತಿಸಿಕೊಂಡಿದೆ. ಲೀಗ್ ಹಂತದಲ್ಲಿ ಬೆಂಗಳೂರು ತಂಡಕ್ಕಿಂತಲೂ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದರೂ, ನೆಟ್ ರನ್ರೇಟ್ ಕೊರತೆಯಿಂದಾಗಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಕ್ವಾಲಿಫೈಯರ್-1ರಲ್ಲಿ ಆರ್ಸಿಬಿ ವಿರುದ್ಧ ಸೋತ ಬಳಿಕ, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಧೂಳೀಪಟ ಮಾಡಿ ಇದೀಗ ಫೈನಲ್ ವೇದಿಕೆಯಲ್ಲಿ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
Also Read: ಗಿಲ್ ಸೆಂಚುರಿ ಆರ್ಭಟಕ್ಕೆ ರಾಜಸ್ಥಾನ ಧೂಳೀಪಟ : ಆರ್.ಆರ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಗುಜರಾತ್ಟೈಟನ್ಸ್
ಐಪಿಎಲ್ ಇತಿಹಾಸದಲ್ಲಿ ಇವೆರಡೂ ತಂಡಗಳು ಒಟ್ಟು 9 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಆರ್ಸಿಬಿ 5 ಪಂದ್ಯಗಳಲ್ಲಿ ಹಾಗೂ ಗುಜರಾತ್ 4 ಪಂದ್ಯಗಳಲ್ಲಿ ಜಯಗಳಿಸಿವೆ. ಆದರೆ, ಲೀಗ್ ಹಂತದಲ್ಲಿ ಇದೇ ಅಹಮದಾಬಾದ್ ಮೈದಾನದಲ್ಲಿ ಗುಜರಾತ್ ವಿರುದ್ಧ ಆರ್ಸಿಬಿ ಸೋತಿತ್ತು ಎಂಬುದು ಗಮನಾರ್ಹ. ಅಹಮದಾಬಾದ್ ಮೈದಾನದ ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್ಗೆ ಹೆಚ್ಚಿನ ನೆರವು ನೀಡಲಿದ್ದು, ಬೃಹತ್ ಮೊತ್ತದ ಪಂದ್ಯವನ್ನು ನಿರೀಕ್ಷಿಸಬಹುದಾಗಿದೆ. ಇಲ್ಲಿ ಚೇಸಿಂಗ್ ಮಾಡಿದ ತಂಡಗಳೇ ಹೆಚ್ಚು ಯಶಸ್ಸು ಕಂಡಿರುವುದರಿಂದ, ಟಾಸ್ ಗೆಲ್ಲುವ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ.
ಇಂದಿನ ಪಂದ್ಯದಲ್ಲಿ ಬೆಂಗಳೂರು ಅಥವಾ ಗುಜರಾತ್ ಯಾರೇ ಗೆದ್ದರೂ ಸಹ, ಐಪಿಎಲ್ ಇತಿಹಾಸದಲ್ಲಿ ಕನಿಷ್ಠ 2 ಟ್ರೋಫಿಗಳನ್ನು ತನ್ನ ಮುಡಿಗೇರಿಸಿಕೊಂಡ ನಾಲ್ಕನೇ ತಂಡ ಎಂಬ ವಿಶೇಷ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ಬಾರಿ, ಮುಂಬೈ ಇಂಡಿಯನ್ಸ್ 5 ಬಾರಿ ಹಾಗೂ ಕೋಲ್ಕತಾ ನೈಟ್ ರೈಡರ್ಸ್ 3 ಬಾರಿ ಕಪ್ ಗೆಲ್ಲುವ ಮೂಲಕ ಸ್ಥಾನ ಪಡೆದಿವೆ.
Exciting IPL final today RCB eyes second consecutive trophy



