Vaibhav Sooryavanshi: 6,6,6,6 ಜಿಂಬಾಬ್ವೆ ವಿರುದ್ದ ವೈಭವ್ ಸೂರ್ಯವಂಶಿ ಸಿಡಿಲಾರ್ಭಟ
ಜಿಂಬಾಬ್ವೆ ವಿರುದ್ದ ಮೂರನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರು ಕೇವಲ 49 ಎಸೆತಗಳಲ್ಲಿ ಬರೋಬ್ಬರಿ 81 ರನ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. 16 ವರ್ಷ ಭರ್ತಿ ಆಗುವ ಮೊದಲೇ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡನೇ ಅರ್ಧ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಹರಾರೆ : ಭಾರತ ಮತ್ತು ಜಿಂಬಾಬ್ವೆ ವಿರುದ್ದ ನಡೆಯುತ್ತಿರುವ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ವಂಡರ್ ಬಾಯ್ ವೈಭವ್ ಸೂರ್ಯವಂಶಿ (Vaibhav Sooryavanshi) ಸಿಡಿಲಾರ್ಭಟದ ಅರ್ಧಶತಕ ಗಳಿಸಿದ್ದಾರೆ. ಕೂದಲೆಳೆಯ ಅಂತರದಲ್ಲಿ ಶತಕ ವಂಚಿತರಾದ್ರೂ ಕೂಡ ವೈಭವ್ ಸೂರ್ಯವಂಶಿ ಅಪರೂಪದ ಮೈಲಿಗಲ್ಲು ಸಾಧಿಸಿದ್ದಾರೆ.
ಜಿಂಬಾಬ್ವೆ ವಿರುದ್ದ ಮೂರನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರು ಕೇವಲ 49 ಎಸೆತಗಳಲ್ಲಿ ಬರೋಬ್ಬರಿ 81 ರನ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ. 16 ವರ್ಷ ಭರ್ತಿ ಆಗುವ ಮೊದಲೇ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಎರಡನೇ ಅರ್ಧ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಭಾರತದ ವಂಡರ್ ಕಿಡ್ ಅಂತಾನೇ ಕರೆಯಿಸಿಕೊಳ್ಳುವ ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ದದ ಸರಣಿಗೆ ಆಯ್ಕೆಯಾಗಿದ್ದರೂ ಕೂಡ ಆಡುವ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರು. ಆದರೆ ಇಂಗ್ಲೆಂಡ್ ಸರಣಿಗೆ ಸ್ಥಾನ ಗಿಟ್ಟಿಸಿಕೊಂಡಿದ್ರೆ, ಬ್ಯಾಟಿಂಗ್ನಲ್ಲಿ ಮಿಂಚು ಹರಿಸಿಲ್ಲ. ಆದರೆ ಜಿಂಬಾಬ್ವೆ ವಿರುದ್ದದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.
ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಬರೋಬ್ಬರಿ ಅರ್ಧ ಶತಕ ಸಿಡಿಸಿದ್ದ ವೈಭವ್ ಸೂರ್ಯವಂಶಿ, ಎರಡನೇ ಪಂದ್ಯದಲ್ಲಿ ವೈಫಲ್ಯ ಅನುಭವಿಸಿದ್ರು. ಆದರೆ ಮೂರನೇ ಪಂದ್ಯದಲ್ಲಿ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಮೂರನೇ ಪಂದ್ಯದಲ್ಲಿ ಆರಂಭಿದಂದಲೇ ಅಬ್ಬರಿಸಿದ ಸೂರ್ಯವಂಶಿ 49 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್ ನೆರವಿನಿಂದ 81 ರನ್ ಸಿಡಿಸಿದ್ದಾರೆ. ವೈಭವ್ ಸೂರ್ಯವಂಶಿಯ ಭರ್ಜರಿ ಬ್ಯಾಟಿಂಗ್ನಿಂದಾಗಿ ಭಾರತ ಭರ್ಜರಿ ಗೆಲುವು ದಾಖಲಿಸಿದೆ.
IND vs ZIM 3rd T20 vaibhav sooryavanshi 81 runs