ಸ್ಮೃತಿ ಮಂದಾನಗಿಲ್ಲ ಸರಿಸಾಟಿ, ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ

ಭಾರತ ಮಹಿಳಾ ಕ್ರಿಕೆಟ್ ತಂಡದ ಖ್ಯಾತ ಆಟಗಾರ್ತಿ ಸ್ಮೃತಿ ಮಂದಾನ (Smriti Mandhana world record) ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. 28 ವರ್ಷಗಳಷ್ಟು ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಇನ್ನು 18 ರನ್ ಬಾರಿಸಿದ್ರೆ ಕ್ಯಾಲೆಂಡರ್ ವರ್ಷದಲ್ಲಿ 1 ಸಾವಿರ ರನ್ ಬಾರಿಸಿದ ಆಟಗಾರ್ತಿ ಎನಿಸಿಕೊಳ್ಳಲಿದ್ದಾರೆ. ಮಹಿಳಾ ವಿಶ್ವಕಪ್‌ನ ದಕ್ಷಿಣ ಆಫ್ರಿಕಾ ವಿರುದ್ದದ ಪಂದ್ಯದಲ್ಲಿ ಸ್ಮೃತಿ ಮಂದಾನ ಕೇವಲ 23 ರನ್ ಬಾರಿಸಿದ್ದಾರೆ.
ಆದರೆ ಕ್ಯಾಲೆಂಡರ್ ವರ್ಷದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಸಾಧನೆಯನ್ನು ಮಾಡಿದ್ದಾರೆ. ಆಸ್ಟ್ರೇಲಿಯಾದ ದಂತಕತೆ ಬೆಲಿಂಡಾ ಕ್ಲಾರ್ಕ್ ಈ ಹಿಂದೆ 1997ರಲ್ಲಿ ಒಂದೇ ವರ್ಷದಲ್ಲಿ 970ರನ್ ಬಾರಿಸುವ ಮೂಲಕ ವಿಶ್ವದಾಖಲೆ ಬರೆದಿದ್ದರು.
ಇದೀಗ ಸ್ಮೃತಿ ಮಂದಾನ 2025ರ ಕ್ಯಾಲೆಂಡರ್ ವರ್ಷದಲ್ಲಿ 982ರನ್ ಬಾರಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. 2025 ರ ವಿಶ್ವಕಪ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿಲ್ಲದಿದ್ದರೂ, ಮಂಧಾನಾ 1000 ರನ್‌ಗಳ ಗಡಿಯನ್ನು ತಲುಪುವ ಸನಿಹದಲ್ಲಿದ್ದಾರೆ.
1000 ರನ್ ಬಾರಿಸ್ತಾರಾ ಸ್ಮೃತಿ ಮಂದಾನ ?
ಮುಂದಿನ ಪಂದ್ಯದಲ್ಲಿ ಮಂಧಾನಾ ಇನ್ನೂ 18 ರನ್ ಗಳಿಸಿದರೆ, ಮಹಿಳಾ ಏಕದಿನ ಪಂದ್ಯಗಳಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 1,000 ರನ್ ತಲುಪಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ 2025 ರ ಮಹಿಳಾ ಏಕದಿನ ವಿಶ್ವಕಪ್‌ನ 10 ನೇ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ಪಡೆಯಿತು.
ಆದರೆ ಸ್ಮೃತಿ ಮಂಧಾನ ಮತ್ತು ಪ್ರತಿಕಾ ರಾವಲ್ ಮೊದಲ ವಿಕೆಟ್‌ಗೆ 55 ರನ್‌ಗಳ ಜೊತೆಯಾಟ ನೀಡಿದ್ದಾರೆ. ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್ ಹೊಂದಿರುವ ಉಪನಾಯಕಿ ಸ್ಮೃತಿ ಮಂಧಾನ ಸತತ ಮೂರನೇ ಪಂದ್ಯಕ್ಕೂ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ದ ಪಂದ್ಯದಲ್ಲಿ ಅವರು ಕೇವಲ 23 ರನ್ ಗಳಿಸುವ ಮೂಲಕ, ಮಂದಾನ 28 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆಫ್ರಿಕಾ ವಿರುದ್ಧ 23 ರನ್‌ಗಳ ಇನ್ನಿಂಗ್ಸ್ ಆಡಿದ ಸ್ಮೃತಿ, ಮಂದಾನ ( (Smriti Mandhana world record) ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.



