ಭಾರತ ಕ್ರಿಕೆಟ್ ತಂಡಕ್ಕೆ ವೈಭವ್ ಸೂರ್ಯವಂಶಿ ಎಂಟ್ರಿ : ಶ್ರೇಯಸ್ ಅಯ್ಯರ್ ನಾಯಕ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದಾಖಲೆಯನ್ನೇ ಬರೆದಿರುವ ವೈಭವ್ ಸೂರ್ಯವಂಶಿ ಕೊನೆಗೂ ಭಾರತ ಕ್ರಿಕೆಟ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮುಂಬರು ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಜೊತೆಗೆ ಏಷ್ಯನ್ ಗೇಮ್ಸ್‌ಗೆ ಪ್ರಕಟಿಸಲಾಗಿರುವ ತಂಡದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ದಾಖಲೆಯನ್ನೇ ಬರೆದಿರುವ ವೈಭವ್ ಸೂರ್ಯವಂಶಿ ಕೊನೆಗೂ ಭಾರತ ಕ್ರಿಕೆಟ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮುಂಬರು ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಜೊತೆಗೆ ಏಷ್ಯನ್ ಗೇಮ್ಸ್‌ಗೆ ಪ್ರಕಟಿಸಲಾಗಿರುವ ತಂಡದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆಯಲ್ಲಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್‌ಗೆ ಕೋಕ್ ನೀಡಲಾಗಿದ್ದು, ಮೂರು ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್ ಪಂದ್ಯಾವಳಿಗೆ ಭಾರತ ಹಿರಿಯರ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ. ಭಾರತ ಕ್ರಿಕೆಟ್ ತಂಡದಲ್ಲಿ ಬಿಸಿಸಿಐ ಹಲವು ಬದಲಾವಣೆಗಳನ್ನು ಮಾಡಿದೆ.
ಟಿ20 ತಂಡಕ್ಕೆ ನಾಯಕನಾಗಿದ್ದ ಸೂರ್ಯಕುಮಾರ್ ಯಾದವ್‌ಗೆ ಬಿಸಿಸಿಐ ಕೋಕ್ ಕೊಟ್ಟಿದೆ. ಐಪಿಎಲ್‌ನಲ್ಲಿ ಉತ್ತಮ ಆಟ ಪ್ರದರ್ಶನ ನೀಡದ ಕಾರಣಕ್ಕೆ ಸೂರ್ಯಕುಮಾರ್ ಯಾದವ್ ನಾಯಕತ್ವ ಮಾತ್ರವಲ್ಲದೇ ಟೀಂ ಇಂಡಿಯಾದಲ್ಲಿಯೂ ಸ್ಥಾನ ಕಳೆದುಕೊಂಡಿದ್ದಾರೆ. ಮೂರು ಸರಣಿಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದ್ದು, ತಿಲಕ್ ವರ್ಮಾ ಉಪನಾಯಕನ ಜವಾಬ್ದಾರಿಯನ್ನು ಹೊರಲಿದ್ದಾರೆ.
ಭಾರತ ಕಿರಿಯರ ತಂಡ ಜೊತೆಗೆ ಈ ಬಾರಿಯ ಐಪಿಎಲ್‌ನಲ್ಲಿ ಸ್ಪೋಟಕ ಆಟದ ಪ್ರದರ್ಶನ ನೀಡಿದ್ದ ವೈಭವ್ ಸೂರ್ಯವಂಶಿ ಭಾರತ ಹಿರಿಯರ ತಂಡಕ್ಕೆ ಎಂಟ್ರಿ ಕೊಟ್ಟಿದ್ದು, ಮೂರು ಸರಣಿಗಳಿಗೂ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಏಷ್ಯನ್ ಗೇಮ್ಸ್‌ಗೆ ಪ್ರಕಟಿಸಿದ ತಂಡದಲ್ಲಿ ಜಸ್ಪ್ರಿತ್ ಬೂಮ್ರಾ ಸ್ಥಾನ ಪಡೆದಿದ್ದಾರೆ.
ಐರ್ಲೆಂಡ್ 20 ಸರಣಿಗೆ ಭಾರತ ಕ್ರಿಕೆಟ್ ತಂಡ : ಶ್ರೇಯಸ್ ಅಯ್ಯರ್ (ನಾಯಕ) ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ( ಉಪನಾಯಕ), ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್.
ಇಂಗ್ಲೆಂಡ್ 20 ಸರಣಿಗೆ ಭಾರತ ಕ್ರಿಕೆಟ್ ತಂಡ : ಶ್ರೇಯಸ್ ಅಯ್ಯರ್ (ನಾಯಕ) ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ( ಉಪನಾಯಕ), ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್.
Also Read : ಆರ್‌ಸಿಬಿ ಸೇರ್ತಾರಾ ವೈಭವ್ ಸೂರ್ಯವಂಶಿ ? IPL 2027 ಹರಾಜಿನ ನಿಯಮಗಳೇನು?
ಏಷ್ಯಾಕಪ್‌ಗೆ ಭಾರತ ಕ್ರಿಕೆಟ್ ತಂಡ : ಶ್ರೇಯಸ್ ಅಯ್ಯರ್ (ನಾಯಕ) ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ( ಉಪನಾಯಕ), ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಜಸ್‌ಪ್ರಿತ್ ಬುಮ್ರಾ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್.
Indian squad Announced Shreyas Iyer india t20 captain Vaibhav Suryavamshi Enter team India



