IPL 2026: ಆರ್​ಸಿಬಿ ದಿಗ್ವಿಜಯ! ಚೆನ್ನೈ ಸೂಪರ್​ ಕಿಂಗ್ಸ್​ಗೆ ಹ್ಯಾಟ್ರಿಕ್​ ಸೋಲು..!

IPL 2026: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಹುನಿರೀಕ್ಷಿತ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್​ ಕಿಂಗ್ಸ್​ ನಡುವಿನ ರಣರೋಚಕ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯಭೇರಿ ಬಾರಿಸಿದೆ. 43 ರನ್​ಗಳ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ತನ್ನ ವಿಜಯದ ನಾಗಾಲೋಟ ಮುಂದುವರಿಸಿದೆ.ಇತ್ತ ಚೆನ್ನೈ ಸೂಪರ್​ ಕಿಂಗ್ಸ್​ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಹ್ಯಾಟ್ರಿಕ್​ ಸೋಲಿನ ಕಹಿ ಅನುಭವಿಸಿದೆ.

ಪoದ್ಯದ ಆರಂಬದಲ್ಲಿ ಟಾಸ್​ ಗೆದ್ದ ಸಿಎಸ್​ಕೆ ಬೌಲಿಂಗ್​ ಆಯ್ಕೆಮಾಡಿಕೊಂಡಿತು . ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 250 ರನ್ ಕಲೆಹಾಕಿ ಚೆನ್ಮೈ ಸೂಪರ್ ಕಿಂಗ್ಸ್ ತಂಡಕ್ಕೆ 251 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ 19.4 ಓವರ್‌ಗಳಲ್ಲಿ 207 ರನ್‌ಗೆ ಆಲೌಟ್​ ಆಗುವ ಮೂಲಕ ಆರ್​ಸಿಬಿ ವಿರುದ್ಧ ಸೋಲನ್ನು ಕಂಡಿತು.

ಇದನ್ನೂ ಓದಿ: BCB Election Probe: ಬಾಂಗ್ಲಾ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ: ICC ಅಂಗಳಕ್ಕೆ ತನಿಖಾ ವರದಿ, ಮಾಸ್ಟರ್‌ ಮೈಂಡ್‌ ನಡೆಗೆ ಸಚಿವರೇ ಗರಂ!

ಆರ್​ಸಿಬಿ ಪರ ಮೊದಲು ಬ್ಯಾಟಿಂಗ್​ಗೆ ಇಳಿದ ವಿರಾಟ್​ ಕೊಹ್ಲಿ ಹಾಗೂ ಫಿಲ್​ ಸಾಲ್ಟ್​ ಸಾಧಾರಣ ಪ್ರದರ್ಶನ ತೋರಿದರು. ಕೊಹ್ಲಿ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಫಿಲ್ ಸಾಲ್ಟ್ 46 ರನ್ ಬಾರಿಸಿದರು. ಇದಾದ ಬಳಿಕ ಕಣಕ್ಕಿಳಿದ ದೇವದತ್​ ಪಡಿಕಲ್​, 29 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. 2 ಸಿಕ್ಸರ್​ 5 ಬೌಂಡರಿಗಳನ್ನು ಬಾರಿಸುವ ಮೂಲಕ ಅದ್ಭುತ ಪ್ರದರ್ಶನ ತೋರಿದರು. ಪಡಿಕಲ್​ ಔಟಾದ ಬಳಿಕ ಬಂದ ನಾಯಕ ರಜತ್ ಪಟಿದಾರ್ ಹಾಗೂ ಟಿಮ್ ಡೇವಿಡ್‌ ಜೋಡಿ 35 ಎಸೆತಗಳಲ್ಲಿ 99 ರನ್ಗಳ ಅತ್ಯದ್ಭುತ ಬ್ಯಾಟಿಂಗ್​ ಪ್ರದರ್ಶಿಸಿ ಸಿಕ್ಸರ್​ಗಳ ಸುರಿಮಳೆಯನ್ನೇಗೈದರು. ರಜತ್ ಪಟಿದಾರ್ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 48 ರನ್ ಬಾರಿಸಿ ಅಬ್ಬರಿಸಿದರೆ, ಟಿಮ್ ಡೇವಿಡ್ 25 ಎಸೆತಗಳಲ್ಲಿ 3 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 70 ರನ್ ಬಾರಿಸಿದರು.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories