IPL 2026 – Virat Kohli : ಆರ್‌ಬಿಸಿಗೆ ವಿರಾಟ್ ಕೊಹ್ಲಿ ಗುಡ್ ಬೈ..!

IPL 2026 – Virat Kohli : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ಕೊಹ್ಲಿ ಆರ್‌ಸಿಬಿ ಪರ ಆಡುವುದು ಅನುಮಾನ.
ಐಪಿಎಲ್ 19ನೇ ಆವೃತ್ತಿಗೂ ಮುನ್ನ ವಿರಾಟ್ ಕೊಹ್ಲಿ ಪ್ರಮುಖ ಕಂಪೆನಿಗಳ ಜೊತೆಗಿನ ತಮ್ಮ ಒಪ್ಪಂದವನ್ನು ನವೀಕರಿಸಲು ನಿರಾಕರಿಸಿದ್ದಾರೆ.
ಹೀಗಾಗಿ ಐಪಿಎಲ್ 2026ಕ್ಕೂ ಮೊದಲೇ ಐಪಿಎಲ್‌ನಿಂದ ದೂರ ಉಳಿತಾರಾ ಅನ್ನೋ ಅನುಮಾನ ವ್ಯಕ್ತವಾಗುತ್ತಿದೆ. ಕಳೆದ ಐಪಿಎಲ್ ಋತುವಿನಲ್ಲಿ ಕೊನೆಯ ಬಾರಿಗೆ ಆರ್‌ಸಿಬಿ ಟ್ರೋಫಿ ಜಯಿಸಿತ್ತು.
ಐಪಿಎಲ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು.
ಈ ಘಟನೆಯಿಂದಾಗಿ ಕೊಹ್ಲಿ ತೀವ್ರ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕೊಹ್ಲಿ, ಸದ್ಯ ಆಸ್ಟ್ರೇಲಿಯಾ ವಿರುದ್ದದ ಏಕದಿನ ಸರಣಿಯ ಬಳಿಕ ಏಕದಿನ ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ.
IPL 2026 – Virat Kohli : 18 ವರ್ಷಗಳ ನಂಟಿಗೆ ಕೊಹ್ಲಿ ಬ್ರೇಕ್
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾದ ದಿನದಿಂದಲೂ ವಿರಾಟ್ ಕೊಹ್ಲಿ ಆರ್‌ಸಿಬಿ ಪರ ಆಡುತ್ತಿದ್ದಾರೆ. ಕಳೆದ ಆವೃತ್ತಿಯ ಆರಂಭದಲ್ಲಿ ವಿರಾಟ್ ಕೊಹ್ಲಿ ಆರ್‌ಸಿಬಿ ತಂಡದಿಂದ ದೂರವಾಗ್ತಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಕೊಹ್ಲಿ ಎನ್ನಲಾಗುತ್ತಿತ್ತು. ಆದರೆ ಅಂತಿಮವಾಗಿ ಆರ್‌ಸಿಬಿ ಪರ ಆಡಿದ್ದ ವಿರಾಟ್ ಕೊಹ್ಲಿ ಐಪಿಎಲ್ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಏಕದಿನ ಕ್ರಿಕೆಟ್ ಮಾತ್ರವಲ್ಲ ಐಪಿಎಲ್‌ಗೆ ಗುಡ್‌ಬೈ ಹೇಳುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಒಂದೊಮ್ಮೆ ಕಿಂಗ್ ಕೊಹ್ಲಿ ಈ ಬಾರಿ ಆರ್‌ಸಿಬಿ ಪರ ಕಣಕ್ಕೆ ಇಳಿಯದೇ ಇದ್ರೆ ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗುವುದು ಖಚಿತ.
IPL 20206 – Virat Kohl plans to quit RCB before IPL 2026 Auction Kannada news



