ಇಂದಿನಿಂದ ಶುರುವಾಗುತ್ತೆ ಐಪಿಎಲ್ ಹಬ್ಬ : ಚೆನ್ಮೈ ಸೂಪರ್ ಕಿಂಗ್ಸ್ ಗೆ ಮುಂಬೈ ಇಂಡಿಯನ್ಸ್ ಎದುರಾಳಿ

0

ದುಬೈ : ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಯ ಪಂದ್ಯಗಳು ಇಂದಿನಿಂದ ಆರಂಭವಾಗಲಿದೆ. ಕೊರೊನಾ ವೈರಸ್ ಸೋಂಕಿ ಹಿನ್ನೆಲೆಯಲ್ಲಿ ಈ ಬಾರಿಯ ಪಂದ್ಯಗಳು ಯುಎಇಗೆ ಶಿಪ್ಟ್ ಆಗಿದ್ದು 4 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಒಟ್ಟು 8 ತಂಡಗಳು ಸುಮಾರು 53 ದಿನಗಳ ಕಾಲ ಟ್ರೋಫಿಗಾಗಿ ಸೆಣೆಸಾಡಲಿವೆ. ಈ ಬಾರಿ ಕೊರೊನಾ ಸೋಂಕಿನ ನಡುವಲ್ಲೂ ಎಲ್ಲಾ ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿವೆ. ಮೇಲ್ನೋಟಕ್ಕೆ ಎಲ್ಲಾ ತಂಡಗಳು ಬಲಿಷ್ಠವಾಗಿರುವಂತೆ ಗೋಚರವಾಗುತ್ತಿದೆ. ಅಲ್ಲದೇ ವಿದೇಶಿ ಆಟಗಾರರು ಈಗಾಗಲೇ ತಂಡವನ್ನು ಕೂಡಿಕೊಂಡಿದ್ದು, ಅರಬ್ ರಾಷ್ಟ್ರದ ಹಾವಾಗುಣಕ್ಕೆ ಒಗ್ಗಿಕೊಂಡಿದ್ದಾರೆ.

ಅಲ್ ಶೇಖ್​​ ಝಹೇದ್​ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಹಾಗೂ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ಮೈ ಸೂಪರ್ ಕಿಂಗ್ಸ್ ತಂಡಗಳು ಹೈಓಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಇಂಡಿಯನ್ಸ್ ತಂಡದ ಪರ ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಕಣಕ್ಕಿಳಿಲಿದ್ರೆ, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್ ಹಾಗೂ ಆಲ್​ರೌಂಢರ್​ಗಳಾದ ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಅಬ್ಬರಿಸಲಿದ್ದಾರೆ.

ಇನ್ನು ಮುಂಬೈ ತಂಡ ಬೌಲಿಂಗ್ ಪಡೆಯು ಬಲಿಷ್ಠವಾಗಿದ್ದು, ನಥಾನ್ ಕೌಲ್ಟರ್ನೈಲ್, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಎದುರಾಳಿಗಳನ್ನು ಕಾಡಲು ಎಲ್ಲಾ ರೀತಿಯಲ್ಲಿಯೂ ಸಜ್ಜಾಗಿದ್ದಾರೆ.

ಇನ್ನು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಬಲಿಷ್ಟವಾಗಿದೆ. ದೇಶೀಯ ಹಾಗೂ ವಿದೇಶಿ ಆಟಗಾರರ ಸಮ್ಮಿಳಿತರ ತಂಡವಾಗಿದ್ದು, ಆಸ್ಟ್ರೇಲಿಯಾದ ಅನುಭವಿ ಆಟಗಾರ ಶೇನ್ ವ್ಯಾಟ್ಸನ್ ಹಾಗೂ ಮುರಳಿ ವಿಜಯ್ ಅವರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಅಂಬಾಟಿ ರಾಯುಡು, ಕೇದಾರ್ ಜಾಧವ್ ಹಾಗೂ ನಾಯಕ ಎಂಎಸ್ ಧೋನಿ ಕಣಕ್ಕಿಳಿದ್ದರೆ, ಆಲ್​ರೌಂಡರ್​ಗಳಾದ ಡ್ವೇನ್ ಬ್ರಾವೊ, ರವೀಂದ್ರ ಜಡೇಜಾ ಹಾಗೂ ಮಿಚೆಲ್ ಸ್ಯಾಂಟ್ನರ್ ತಂಡಕ್ಕೆ ನೆರವಾಗಲಿದ್ದಾರೆ.

ಇನ್ನು ಚೆನ್ಮೈ ತಂಡದ ಬೌಲಿಂಗ್ ಬಲ ಕೂಡ ಬಲಿಷ್ಠವಾಗಿದೆ. ದೀಪಕ್ ಚಹರ್ ಹಾಗೂ ಶಾರ್ದೂಲ್ ಠಾಕೂರ್ ಇದ್ದರೆ ಸ್ಪಿನ್ ಮಾಂತ್ರಿಕ ಇಮ್ರಾನ್ ತಾಹೀರ್ ಆಡುವ ಸಾಧ್ಯತೆ ಇದೆ.

Leave A Reply

Your email address will not be published.