ಕರ್ನಾಟಕದ ಅಳಿಯ ಸೂರ್ಯಕುಮಾರ್ ಮನೆಗೆ ಮಹಾಲಕ್ಷ್ಮಿಯ ಆಗಮನ! ಹೆಣ್ಣು ಮಗುವಿಗೆ ಜನ್ಮ ನೀಡಿದ ದೇವಿಶಾ ಶೆಟ್ಟಿ

ಮುಂಬೈ ಇಂಡಿಯನ್ಸ್​ ಪರ ಆಡುತ್ತಿರುವ ಕ್ರಿಕೆಟಿಗ ಸೂರ್ಯಕುಮಾರ್​ ಯಾದವ್​, ಸದ್ಯ ತಮ್ಮ ಕಳಪೆ ಪ್ರದರ್ಶನದಿಂದಾಗಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸುತ್ತಿದ್ದಾರೆ

ಐಪಿಎಲ್ ಪಂದ್ಯಾವಳಿಯಲ್ಲಿ ಮುಂಬೈ ಇಂಡಿಯನ್ಸ್​ ಪರ ಆಡುತ್ತಿರುವ ಕ್ರಿಕೆಟಿಗ ಸೂರ್ಯಕುಮಾರ್​ ಯಾದವ್​, ಸದ್ಯ ತಮ್ಮ ಕಳಪೆ ಪ್ರದರ್ಶನದಿಂದಾಗಿ ಅಭಿಮಾನಿಗಳಲ್ಲಿ ನಿರಾಶೆ ಮೂಡಿಸುತ್ತಿದ್ದಾರೆ. ಇದರಿಂದ ಸಾಕಷ್ಟು ಟೀಕೆಯನ್ನು ಎದುರಿಸುತ್ತಿರುವ ಸೂರ್ಯಕುಮಾರ್​ ಜೀವನದಲ್ಲಿ ಹೊಸ ಹುಮ್ಮಸ್ಸು ಬಂದಿದೆ.

ಹೌದು..! ಕ್ರಿಕೆಟಿಗ ಸೂರ್ಯಕುಮಾರ್​ ಯಾದವ್​ ಹಾಗೂ ದೇವಿಶಾ ಶೆಟ್ಟಿ ದಂಪತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರವನ್ನು ಸ್ವತಃ ಸೂರ್ಯಕುಮಾರ್​ ಯಾದವ್​ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ  ಓದಿ :  ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ಇಲ್ಲ! ಫ್ಯಾನ್ಸ್‌ಗೆ ನಿರಾಶೆ ತಂದ ಕೆಎಸ್‌ಸಿಎ ನಡೆ; ಅಸಲಿ ಕಾರಣ ಇಲ್ಲಿದೆ ನೋಡಿ..

ಸೂರ್ಯಕುಮಾರ್​ ಯಾದವ್​ ಪತ್ನಿ ದೇವಿಶಾ ಶೆಟ್ಟಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಕಾಪು ಮಾರಿಯಮ್ಮ ದೇವಿಯ ಭಕ್ತರಾಗಿರುವ ಈ ದಂಪತಿ ಸದಾ ಇಲ್ಲಿಗೆ ಆಗಮಿಸುತ್ತಿರುತ್ತಾರೆ. 10 ವರ್ಷಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ ಇದೀಗ ಪೋಷಕರಾಗಿ ಬಡ್ತಿ ಪಡೆದಿದ್ದಾರೆ.

ಕಾಲೇಜು ದಿನಗಳಲ್ಲಿಯೇ ಪರಸ್ಪರ ಪ್ರೀತಿಸಿ 2016ರ ಜುಲೈ 7ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿತ್ತು. ಇದಾದ ಬಳಿಕ ಸೂರ್ಯಕುಮಾರ್​ ಯಾದವ್​ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದು, ಉತ್ತಮ ಪ್ರದರ್ಶನ ತೋರಿದ್ದಾರೆ. ಈ ಬಾರಿ ಯಾಕೋ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಸೂರ್ಯ ಕುಮಾರ್​ ಯಾದವ್​ ಮಗಳ ಆಗಮನದ ಬಳಿಕ ತಮ್ಮ ಫಾರ್ಮ್ ಬದಲಿಸಿಕೊಳ್ತಾರಾ ಅನ್ನೋದನ್ನ ಕಾದು ನೋಡ್ಬೇಕಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories