RCB Returns Home : ಕ್ರಿಕೆಟ್​ ಅಭಿಮಾನಿಗಳಿಗೆ ಗುಡ್​ನ್ಯೂಸ್​ : ಚಿನ್ನಸ್ವಾಮಿಯಲ್ಲಿ ಪಂದ್ಯಾವಳಿ ನಡೆಸಲು ರಾಜ್ಯ ಸರ್ಕಾರದಿಂದ ಅಸ್ತು

RCB Returns Home : ಕನ್ನಡಿಗ ಕ್ರಿಕೆಟ್​ ಅಭಿಮಾನಿಗಳ ಅಭಿಲಾಷೆಯನ್ನು ಈಡೇರಿಸುವ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಮತ್ತೊಮ್ಮೆ ಅವಕಾಶ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿಕೆ ನೀಡಿದ್ದು ಆರ್​ಸಿಬಿ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲ ಎಂಬಂತಾಗಿದೆ.

ವಿಧಾನಸೌಧದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕ್ರೀಡಾಂಗಣದಲ್ಲಿ ಎಷ್ಟು ಜನಸಂದಣಿ ಸಾಧ್ಯವೋ ಅಷ್ಟು ಮಾತ್ರ ಟಿಕೆಟ್​ ಮಾರಾಟವಾಗಬೇಕು. ದೊಡ್ಡ ಗೇಟ್​, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಕುನ್ಹಾ ಅವರ ವರದಿಯ ಶಿಫಾರಸ್ಸಿನ ಆಧಾರದಲ್ಲಿ ಕ್ರಮ ಕೈಗೊಂಡು ಪಂದ್ಯ ಆಯೋಜನೆಗೆ ಅನುಮತಿ ನೀಡಲಾಗಿದೆ ಎಂದಿದ್ದಾರೆ.

Also Read : ಬಿಸಿಸಿಐ ವಾರ್ಷಿಕ ಗುತ್ತಿಗೆ : ರೋಹಿತ್‌ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರದಿಂದ ಗ್ರೀನ್​ ಸಿಗ್ನಲ್​ ಸಿಕ್ಕಿದ್ದರೂ ಸಹ ಆರ್​ಸಿಬಿ ತಂಡ ಈ ಮೈದಾನದಲ್ಲಿ ಕಣಕ್ಕಿಳಿಯಲಿದೆಯೇ ಎಂಬುದು ಇಂದಿಗೂ ಕುತೂಹಲಕಾರಿ ಪ್ರಶ್ನೆಯಾಗಿಯೇ ಉಳಿಯಲಿದೆ.

ಈ ಬಗ್ಗೆ ಬಿಸಿಸಿಐನಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಈ ಸಂಬಂಧ ಶೀಘ್ರದಲ್ಲಿಯೇ ಕರ್ನಾಟಕ ರಾಜ್ಯ ಕ್ರಿಕೆಟ್​ ಸಂಸ್ಥೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವುದಾಗಿ ತಿಳಿಸಿದೆ.

Aslo Read : ಕೆ.ಎಲ್. ರಾಹುಲ್ ಶತಕದ ಅಬ್ಬರ: ಮುಂಬೈ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

RCB Returns Home Karnataka Govt Permits IPL 2026 Matches at Chinnaswamy Stadium

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories