MI vs GT: ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್ ! ಗುಜರಾತ್‌ ವಿರುದ್ದದ ಪಂದ್ಯಕ್ಕೆ ರೋಹಿತ್, ಹಾರ್ದಿಕ್ ಔಟ್ ?

ಐಪಿಎಲ್ 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗುತ್ತಿವೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ.

ಅಹಮದಾಬಾದ್: ಐಪಿಎಲ್ 2026ರ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ಮತ್ತು ಮುಂಬೈ ಇಂಡಿಯನ್ಸ್ (MI) ಮುಖಾಮುಖಿಯಾಗುತ್ತಿವೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್ ಮುಂಬೈ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಮುಂಬೈ ಇಂಡಿಯನ್ಸ್‌ ತಂಡದ ಖ್ಯಾತ ಆಟಗಾರ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಮತ್ತು ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಇಂದಿನ ಪಂದ್ಯದಿಂದ ಹೊರಬೀಳುವ ಸಾಧ್ಯತೆಯಿದೆ. ಇದು ಮುಂಬೈ ಇಂಡಿಯನ್ಸ್‌ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ರೋಹಿತ್ ಶರ್ಮಾಗೆ ಹ್ಯಾಮ್‌ಸ್ಟ್ರಿಂಗ್ ಸಮಸ್ಯೆ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧದ ಪಂದ್ಯದ ವೇಳೆ ಹ್ಯಾಮ್‌ಸ್ಟ್ರಿಂಗ್ ಇಂಜುರಿಗೆ ಒಳಗಾಗಿದ್ದ ರೋಹಿತ್ ಶರ್ಮಾ, ಈಗಾಗಲೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಸದ್ಯ ಅಹಮದಾಬಾದ್‌ನಲ್ಲಿ ನೆಟ್ ಪ್ರಾಕ್ಟೀಸ್ ನಡೆಸುತ್ತಿದ್ದರೂ ಕೂಡ ವೈದ್ಯಕೀಯ ತಂಡವು ಅವರ ಫಿಟ್‌ನೆಸ್ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಸದ್ಯ ಐಪಿಎಲ್‌ ಲೀಗ್‌ ಹಂತದ ಪಂದ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ಅವರಿಗೆ ವಿಶ್ರಾಂತಿ ನೀಡಿ ಮುಂದಿನ ಪಂದ್ಯಗಳಿಗೆ ಉಳಿಸಿಕೊಳ್ಳಲು ತಂಡದ ಆಡಳಿತ ಮಂಡಳಿ ನಿರ್ಧಾರ ಮಾಡಿದೆ.

ಹಾರ್ದಿಕ್ ಪಾಂಡ್ಯ ಔಟ್‌ ?

ರೋಹಿತ್‌ ಶರ್ಮಾ ಮಾತ್ರವಲ್ಲ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಮುಂದಿನ ಪಂದ್ಯದಲ್ಲಿ ಆಡುವುದು ಬಹುತೇಕ ಅನುಮಾನ. ಮಾಧ್ಯಮಗಳ ವರದಿಯ ಪ್ರಕಾರ, ಹಾರ್ದಿಕ್ ಪಾಂಡ್ಯ ಅವರು ಫಿಟ್‌ನೆಸ್ ಕೊರತೆಯಿಂದಾಗಿ ಒಂದೆರಡು ಪಂದ್ಯಗಳಿಂದ ಅವರು ಹೊರಗೆ ಉಳಿಯುವ ಸಾಧ್ಯತೆಯಿದೆ. ಕಳೆದ ಪಂದ್ಯದ ಟಾಸ್‌ ವೇಳೆಯಲ್ಲಿಯೇ ಪಾಂಡ್ಯ ಈ ಕುರಿತು ಸುಳಿವು ನೀಡಿದ್ದರು. ಒಂದೊಂದೆ ಪಾಂಡ್ಯ ಕೂಡ ತಂಡದಿಂದ ಹೊರಬಿದ್ರೆ ಮುಂಬೈಗೆ ಹೊಡೆತ ಎದುರಾಗಲಿದೆ.

ಮೂರನೇ ಶಾಕ್: ಮಿಚೆಲ್ ಸ್ಯಾಂಟ್ನರ್ ಔಟ್

ಕೇವಲ ಬ್ಯಾಟರ್‌ಗಳಷ್ಟೇ ಅಲ್ಲ, ಬೌಲಿಂಗ್ ವಿಭಾಗದಲ್ಲೂ ಮುಂಬೈಗೆ ಪೆಟ್ಟು ಬಿದ್ದಿದೆ. ನ್ಯೂಜಿಲೆಂಡ್‌ನ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಕಳೆದ ಪಂದ್ಯದಿಂದ ಅನಾರೋಗ್ಯದ ಕಾರಣ ಹೊರಗುಳಿದಿದ್ದರು. ಇಂದಿನ ಪಂದ್ಯಕ್ಕೂ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ವರದಿಯಾಗಿದ್ದು, ಅವರ ಸ್ಥಾನದಲ್ಲಿ ಎಂ. ಗಜನ್‌ಫರ್ ಅಥವಾ ಕಾರ್ಬಿನ್ ಬಾಷ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2026: ರಿಂಕು ಸಿಂಗ್ ಅಬ್ಬರ; ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಮೊದಲ ಜಯ

ಮುಂಬೈ ತಂಡದ ಸಂಭಾವ್ಯ ಪ್ಲೇಯಿಂಗ್ XI

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್ ಮತ್ತು ರಿಯಾನ್ ರಿಕೆಲ್ಟನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮಧ್ಯಮ ಕ್ರಮಾಂಕದ ಜವಾಬ್ದಾರಿ ಹೊರಬೇಕಿದೆ.

ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್‌ ಕೀಪರ್), ರಿಯಾನ್ ರಿಕೆಲ್ಟನ್, ಸೂರ್ಯಕುಮಾರ್ ಯಾದವ್ ( ನಾಯಕ) , ತಿಲಕ್ ವರ್ಮಾ, ನಮನ್ ಧೀರ್, ಶರ್ಫೇನ್ ರುದರ್‌ಫೋರ್ಡ್, ಶಾರ್ದೂಲ್ ಠಾಕೂರ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್/ಕಾರ್ಬಿನ್ ಬಾಷ್.

ಗುಜರಾತ್ ಟೈಟಾನ್ಸ್ ಸವಾಲು‌

ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ಪ್ರಸ್ತುತ ಪಾಯಿಂಟ್ಸ್ ಟೇಬಲ್‌ನಲ್ಲಿ ಮುಂಚೂಣಿಯಲ್ಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತವರಿನ ಬೆಂಬಲದೊಂದಿಗೆ ಕಣಕ್ಕಿಳಿಯಲಿರುವ ಜಿಟಿ ತಂಡವನ್ನು ಎದುರಿಸುವುದು ದುರ್ಬಲಗೊಂಡಿರುವ ಮುಂಬೈ ಇಂಡಿಯನ್ಸ್‌ಗೆ ಅಗ್ನಿಪರೀಕ್ಷೆಯಾಗಲಿದೆ.

ಮುಂಬೈ ಇಂಡಿಯನ್ಸ್ ಈಗಾಗಲೇ ಐದು ಪಂದ್ಯಗಳಲ್ಲಿ ನಾಲ್ಕು ಸೋಲುಗಳನ್ನು ಕಂಡು ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿದೆ. ಈಗ ಸ್ಟಾರ್ ಆಟಗಾರರ ಗಾಯದ ಸಮಸ್ಯೆ ತಂಡವನ್ನು ಮತ್ತಷ್ಟು ಹೈರಾಣಾಗಿಸಿದೆ. ಹಾರ್ದಿಕ್ ಮತ್ತು ರೋಹಿತ್ ಅವರ ಅನುಪಸ್ಥಿತಿಯನ್ನು ಸೂರ್ಯಕುಮಾರ್ ಯಾದವ್ ಹೇಗೆ ನಿಭಾಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021

Related Stories