Rohit Sharma : ಲಾರ್ಡ್‌ನಲ್ಲಿ ರೋಹಿತ್ ಶರ್ಮಾ ವಿಶ್ವದಾಖಲೆಯ ಶತಕ : ಟೀಕಾಕಾರರ ಬಾಯಿ ಮುಚ್ಚಿಸಿದ ಹಿಟ್ ಮ್ಯಾನ್
ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ವಿಶ್ವದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ದ 138 ರನ್ ಸಿಡಿಸುವ ಮೂಲಕ ಲಾರ್ಡ್ಸ್ ಅಂಗಳದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

ಲಂಡನ್ : ಭಾರತ – ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ (Rohit Sharma ) ವಿಶ್ವದಾಖಲೆ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ದ 138 ರನ್ ಸಿಡಿಸುವ ಮೂಲಕ ಲಾರ್ಡ್ಸ್ (lords) ಅಂಗಳದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ. ಈ ಮೂಲಕ ನಿವೃತ್ತಿ ಬಗ್ಗೆ ವದಂತಿ ಹಬ್ಬಿಸಿದವರ ಬಾಯಿ ಮುಚ್ಚಿಸಿದ್ದಾರೆ.
ಭಾರತದ ಪಾಲಿಗೆ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಆಪತ್ಬಾಂಧವ ಅನ್ನೋದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ದ ಏಕದಿನ ಸರಣಿಯಲ್ಲಿ ಮೊದಲ ಪಂದ್ಯವನ್ನು ಜಯಿಸಿದ ಭಾರತ ಎರಡನೇ ಪಂದ್ಯದಲ್ಲಿ ಸೋಲನ್ನು ಕಂಡಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಜಯಿಸುವ ತಂಡ ಸರಣಿಯನ್ನು ಜಯಿಸಲಿದೆ. ಇದೇ ಕಾರಣದಿಂದಲೇ ಭಾರತ ಜಾಣ್ಮೆಯ ಇನ್ನಿಂಗ್ಸ್ ಆರಂಭಿಸಿತ್ತು.
ಇಂಗ್ಲೆಂಡ್ ತಂಡ ನೀಡಿದ್ದ 388 ರನ್ ಟಾರ್ಗೆಟ್ ಪಡೆದ ಭಾರತ ತಂಡದ ಪರ ಇನ್ನಿಂಗ್ಸ್ ಆರಂಭಿಸಿದ್ದ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಹಾಗೂ ನಾಯಕ ಶುಭಮನ್ ಗಿಲ್ ಶತಕದ ಜೊತೆಯಾಟ ಆಗಿದ್ದಾರೆ. ರೋಹಿತ ಶರ್ಮಾ 110 ಎಸೆತಗಳನ್ನು ಎದುರಿಸಿ ಬರೋಬ್ಬರಿ 5 ಸಿಕ್ಸರ್ ಹಾಗೂ 17 ಬೌಂಡರಿಗಳ ನೆರವಿನಿಂದ ರೋಹಿತ್ ಶರ್ಮಾ 138ರನ್ ಬಾರಿಸಿ ತಂಡಕ್ಕೆ ನೆರವಾಗಿದ್ದಾರೆ.
ರೋಹಿತ್ ವಿಶ್ವದಾಖಲೆಯ ಶತಕ
ಇಂಗ್ಲೆಂಡ್‌ನ ಲಾರ್ಡ್ಸ್ ಅನ್ನು ಕ್ರಿಕೆಟ್ ಕಾಶಿ ಅಂತಾ ಕರೆಯುತ್ತಾರೆ. ಇಂತಹ ಲಾರ್ಡ್ಸ್ ಮೈದಾನದಲ್ಲಿ ಭಾರತದ ಯಾವೊಬ್ಬ ಆಟಗಾರ ಕೂಡ ಇದುವರೆಗೂ ಶತಕ ಸಿಡಿಸಿಲ್ಲ. ರೋಹಿತ್ ಶರ್ಮಾ ಅವರು ಶತಕ ಸಿಡಿಸುವ ಮೂಲಕ ಲಾರ್ಡ್ಸ್ ಅಂಗಳದಲ್ಲಿ ಮೊದಲ ಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ.
ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ತಂಡದ ಆಟಗಾರ ಡೆನ್ನಿಸ್ ಅಮಿಸ್ 1975ರಲ್ಲಿ ಆಸ್ಟ್ರೇಲಿಯಾ ವಿರುದ್ದ ಪಂದ್ಯದಲ್ಲಿ 137ರನ್ ಬಾರಿಸಿದ್ದರು. ಇದು ಲಾರ್ಡ್ಸ್ ಅಂಗಳದಲ್ಲಿ ದಾಖಲಾದ ಮೊದಲ ಶತಕ ಇದಾಗಿತ್ತು. ನಂತರದಲ್ಲಿ ವೆಸ್ಟ್ ಇಂಡಿಸ್ ತಂಡ ಕ್ಲೈವ್ ಲಾಯ್ಡ್ 1975ರ ಮೊದಲ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ 102ರನ್ ಬಾರಿಸಿದ್ದರು. ನಂತರದಲ್ಲಿ ವೆಸ್ಟ್ ಇಂಡಿಸ್‌ನ ವಿವ್ ರಿಚರ್ಡ್ಸ್ 1979ರ ವಿಶ್ವಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ದ 138 ರನ್ ಬಾರಿಸಿದ್ದರು. ಇನ್ನು 2006ರಲ್ಲಿ ಶ್ರೀಲಂಕಾ ತಂಡದ ಸನತ್ ಜಯಸೂರ್ಯ ಇಂಗ್ಲೆಂಡ್ ವಿರುದ್ದ 152ರನ್ ಬಾರಿಸಿದ್ದರು. ಇದೀಗ ರೋಹಿತ್ ಶರ್ಮಾ ಕೂಡ ಕ್ರಿಕೆಟ್ ದಿಗ್ಗಜರ ಸಾಲಿಗೆ ಸೇರ್ಪಡೆ ಆಗಿದ್ದಾರೆ.
ಇಂಗ್ಲೆಂಡ್ ತಂಡದ ಆಟಗಾರ ಮಾರ್ಕಸ್ ಟ್ರೆಸ್ಕೋಥಿಕ್ ಲಾರ್ಡ್ಸ್ ಅಂಗಳದಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದುವರೆಗೆ ಒಟ್ಟು ಮಾರ್ಕಸ್ ಟ್ರೆಸ್ಕೋಥಿಕ್ ಒಟ್ಟು 4 ಶತಕ ಸಿಡಿಸಿದ್ದಾರೆ. ಇಂದಿನ ಪಂದ್ಯದಲ್ಲಿಯೇ ಇಂಗ್ಲೆಂಡ್ ತಂಡದ ಬೆನ್ ಡಕೆಟ್ 141ರನ್ ಬಾರಿಸುವ ಮೂಲಕ ಶತಕ ಸಿಡಿಸಿದ್ದಾರೆ.
ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ವಿರುದ್ದ ಅಂತಿಮ ಏಕದಿನ ಪಂದ್ಯದಲ್ಲಿಯೇ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡ್ತಾರೆ ಅನ್ನೋ ಸುದ್ದಿಯಾಗಿತ್ತು. ರೋಟೆಷನ್ ಪದ್ದತಿಯನ್ನು ಬಿಸಿಸಿಐ ಜಾರಿ ಮಾಡ್ತಾ ಇದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರಿಗೆ ಮುಂದಿನ ಸರಣಿಗೆ ವಿಶ್ರಾಂತಿ ನೀಡಲಾಗುತ್ತದೆ. ಇದೇ ಕಾರಣದಿಂದಲೇ ರೋಹಿತ್ ಶರ್ಮಾ ಲಾರ್ಡ್ಸ್ ಅಂಗಳದಲ್ಲಿ ನಿವೃತ್ತಿ ಘೋಷಣೆ ಮಾಡ್ತಾರೆ ಅನ್ನೋದು ಗಾಸಿಫ್ ಹರಡಿತ್ತು.
ಹಿಟ್ ಮ್ಯಾನ್ ರೋಹಿತ್ ಶರ್ಮಾ ಇದೀಗ ಅದೇ ಲಾರ್ಡ್ಸ್ ಅಂಗಳದಲ್ಲಿ ಶತಕ ಸಿಡಿಸುವ ಮೂಲಕ ಟೀಕಾಕಾರ ಬಾಯಿ ಮುಚ್ಚಿಸಿದ್ದಾರೆ. ತನ್ನಲ್ಲಿ ಇನ್ನೂ ಪಂದ್ಯ ಗೆಲ್ಲಿಸುವ ತಾಕತ್ತು ಇದೇ ಅನ್ನೋದನ್ನು ಸಾಬೀತು ಪಡಿಸಿದ್ದಾರೆ. ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ದ ಟಿ20 ಸರಣಿಯನ್ನು ಸೋತು ಸುಣ್ಣವಾಗಿರುವ ಭಾರತಕ್ಕೆ ಇದೀಗ ರೋಹಿತ್ ಶರ್ಮಾ ಫಾರ್ಮ್‌ಗೆ ಮರಳಿರುವುದು ದೊಡ್ಡ ಲಾಭ ತಂದಿದೆ.
rohit sharma hundred at lords world record Kannada News

