ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ಶುಭಮನ್ ಗಿಲ್ ನಾಯಕ, ರೋಹಿತ್ ಶರ್ಮಾಗೆ ಕೋಕ್
ನವದೆಹಲಿ : Shubman Gill: ಭಾರತ ಏಕದಿನ ತಂಡದ ನಾಯಕನನ್ನಾಗಿ ಶುಭಮನ್ ಗಿಲ್(Shubman Gill) ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಮೂಲಕ ರೋಹಿತ್ ಶರ್ಮಾಗೆ ನಾಯಕತ್ವದಿಂದ ಕೋಕ್ ನೀಡಲಾಗಿದೆ.
ವೆಸ್ಟ್‌ಇಂಡಿಸ್ ಸರಣಿಯ ಬೆನ್ನಲ್ಲೇ ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ವಿರುದ್ದ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಯ ಮೂಲಕ ಶುಭಮನ್ ಗಿಲ್ ಪೂರ್ಣ ಪ್ರಮಾಣದ ನಾಯಕರಾಗಲಿದ್ದಾರೆ.
ಏಕದಿನ ತಂಡಕ್ಕೆ ಶುಭಮನ್ ಗಿಲ್ ನಾಯಕರಾಗಿದ್ರೆ, ಶ್ರೇಯಸ್ ಅಯ್ಯರ್ ಅವರನ್ನು ಉಪನಾಯಕನ್ನಾಗಿ ಆಯ್ಕೆ ಮಾಡಲಾಗಿದೆ. ನಾಯಕತ್ವದಿಂದ ಕೋಕ್ ನೀಡಿದ್ದರೂ ಕೂಡ ರೋಹಿತ್ ಶರ್ಮಾ ಏಕದಿನ ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
Also read: 9ನೇ ಬಾರಿಗೆ ಏಷ್ಯಾಕಪ್ ಗೆದ್ದ ಭಾರತ: ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು
2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಈ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಶುಭಮನ್ ಗಿಲ್ ಈಗಾಗಲೇ ಟೆಸ್ಟ್ ತಂಡದ ನಾಯಕರಾಗಿದ್ದಾರೆ. ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚು ಮಣೆ ಹಾಕಲಾಗಿದೆ.
ಭಾರತ ಕ್ರಿಕೆಟ್ ತಂಡ :
ಶುಭಮನ್ ಗಿಲ್- ನಾಯಕ (Captain), ಶ್ರೇಯಸ್ ಅಯ್ಯರ್ – ಉಪ ನಾಯಕ (Vice-Captain), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್-ಬ್ಯಾಟರ್),
ಧ್ರುವ್ ಜುರೆಲ್ (ವಿಕೆಟ್ ಕೀಪರ್-ಬ್ಯಾಟರ್ ಬ್ಯಾಕಪ್),ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಕುಲದೀಪ್ ಯಾದವ್ ಸ್ಪಿನ್ನರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ರ್ಷಿತ್ ರಾಣಾ, ಅರ್ಷದೀಪ್ ಸಿಂಗ್
Also read: ಏಷ್ಯಾಕಪ್ ಫೈನಲ್, ಪಾಕಿಸ್ತಾನ – ಭಾರತ ವಿರುದ್ದ ಪಂದ್ಯದಿಂದ ಹಾರ್ದಿಕ್ ಪಾಂಡ್ಯ, ಅಭಿಷೇಕ್ ಶರ್ಮಾ ಔಟ್
ಆಲ್-ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಗಾಯದ ಕಾರಣ ಈ ಸರಣಿಯಿಂದ ಹೊರಗುಳಿದಿದ್ದಾರೆ. ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರಿಗೆ ಕೆಲಸದ ಒತ್ತಡ ದೃಷ್ಟಿಯಿಂದ ವಿಶ್ರಾಂತಿ ನೀಡಲಾಗಿದೆ.



