Team India: ಗೆದ್ದು ಬಾ ಟೀಂ ಇಂಡಿಯಾ : ಏಕದಿನ ವಿಶ್ವಕಪ್‌ನಲ್ಲಿ 3ನೇ ಬಾರಿಗೆ ಭಾರತ ಎಂಟ್ರಿ
ಮುಂಬೈ: Team India: ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವ ಮೂಲಕ ಭಾರತ ಮಹಿಳೆಯ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಮೂರನೇ ಬಾರಿಗೆ ಭಾರತ ಮಹಿಳೆಯರು ವಿಶ್ವಕಪ್ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ತನ್ನ ಎಲ್ಲಾ ವಿಕೆಟ್ ಕಳೆದು ಕೊಂಡು 338 ರನ್ ಬಾರಿಸಿತ್ತು.
ದಾಖಲೆಯ ಮೊತ್ತವನ್ನು ಬೆನ್ನತ್ತಲು ಹೊರಟ ಭಾರತ ತಂಡಕ್ಕೆ ಸ್ಮೃತಿ ಮಂದಾನ(Smriti mandhana) ಹಾಗೂ ಶಿಫಾಲಿ ವರ್ಮ ಉತ್ತಮ ಆರಂಭ ನೀಡುವಲ್ಲಿ ವಿಫಲರಾಗಿದ್ದರು. ನಂತರ ಜೊತೆಯಾದ ಜೆಮಿಯಾ ರಾಡ್ರಿಗಸ್ ಹಾಗೂ ನಾಯಕಿ ಹರ್ಮನ್ ಪ್ರೀತ್ ಕೌರ್ ಎರಡನೇ ವಿಕೆಟ್‌ಗೆ ಬರೋಬ್ಬರಿ ಶತಕದ ಜೊತೆಯಾಟ ಆಡಿದ್ದಾರೆ.
89 ರನ್ ಗಳಿಸಿ ಔಟಾದ್ರೆ ಜೆಮಿಯಾ ರಾಡ್ರಿಗಸ್ ಭರ್ಜರಿ ಶತಕ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದಿಟ್ಟರು. ಭಾರತದ ಮಹಿಳೆಯರ ತಂಡ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
Also Read : ICC Women’s World Cup 2025 : ಐಸಿಸಿ ಮಹಿಳಾ ವಿಶ್ವಕಪ್ 2025 ಪಾಕಿಸ್ತಾನ ಔಟ್: ಭಾರತದಲ್ಲೇ ಫೈನಲ್ ಪಂದ್ಯ ಫಿಕ್ಸ್
2005ರಲ್ಲಿ ಮಿಥಾಲಿ ರಾಜ್ ನೇತೃತ್ವದಲ್ಲಿ ತಂಡ ಫೈನಲ್ ಪ್ರವೇಶಿಸಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದ ಸೋಲನ್ನು ಕಂಡಿತ್ತು. ನಂತರ 2017ರಲ್ಲಿಯೂ ಮಿಥಾಲಿ ರಾಜ್ ನೇತೃತ್ವದಲ್ಲಿಯೇ ಭಾರತ ತಂಡ ಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ತಂಡದ ವಿರುದ್ದ ಸೋಲನುಭವಿಸಿತ್ತು.
ಇದೀಗ ಹರ್ಮನ್ ಪ್ರೀತ್ ಕೌರ್ ನೇತೃತ್ವದಲ್ಲಿ ಭಾರತ ತಂಡ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಭಾರತ ತಂಡ ನವೆಂಬರ್ 2 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಭಾರತ ಚೊಚ್ಚಲ ಬಾರಿಗೆ ವಿಶ್ವಕಪ್ ಗೆಲ್ಲುವಂತೆ ಕೋಟ್ಯಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Also Read: ಟೀಂ ಇಂಡಿಯಾ ಮಹಿಳಾ ಆಟಗಾರರಿಗೆ ಪುರುಷ ಆಟಗಾರರಷ್ಟೇ ವೇತನ ದೊರೆಯುತ್ತಾ : ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ



