ವಿರಾಟ್‌ ವಿಶ್ವದಾಖಲೆ : ಕೊಹ್ಲಿ ಶತಕಗಳ ಸರದಾರ, ಸಚಿನ್‌ ತೆಂಡೂಲ್ಕರ್‌ ದಾಖಲೆ ಉಡೀಸ್‌

Virat Kohli World Record : ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ದ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಭರವಸೆಯ ಆಟಗಾರ ವಿರಾಟ್‌ ಕೊಹ್ಲಿ ಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. ಈ ಮೂಲಕ ವಿಶ್ವದಲ್ಲಿಯೇ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ರಾಂಚಿಯಲ್ಲಿರುವ ಜೆಎಸ್ಸಿಎ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್‌ ನಡೆಸಿತ್ತು. ಟೀಂ ಇಂಡಿಯಾದ ಪರ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಆರ್ಭಟಿಸಿದ್ದಾರೆ.

ವಿರಾಟ್‌ ಕೊಹ್ಲಿ ಕೇವಲ 102 ಎಸೆತಗಳಲ್ಲಿ 103 ಶತಕ ಬಾರಿಸುವ ಮೂಲಕ ವಿಶ್ವದಾಖಲೆ ಬರೆದಿದ್ದಾರೆ. ವಿರಾಟ್‌ ಕೊಹ್ಲಿ ಈ ಹಿಂದೆ 51 ಶತಕ ಬಾರಿಸುವ ಮೂಲಕ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಿದ್ದರು.

ಆದ್ರೆ ಇಂದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ 52 ಶತಕ ಬಾರಿಸುವ ಮೂಲಕ ಸಚಿನ್‌ ದಾಖಲೆಯನ್ನೇ ಅಳಿಸಿ ಹಾಕಿದ್ದರು. ಸಚಿನ್‌ ತೆಂಡೂಲ್ಕರ್‌ ಒಟ್ಟು 51 ಶತಕಗಳನ್ನು ಬಾರಿಸಿದ್ರೆ, ರೋಹಿತ್‌ ಶರ್ಮಾ 33 ಶತಕ ಬಾರಿಸಿದ್ದಾರೆ. ಏಕದಿನ ಕ್ರಿಕೆಟ್‌ ನಲ್ಲಿ ಅತೀ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ವಿರಾಟ್‌ ಕೊಹ್ಲಿ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ.

ವಿರಾಟ್‌ ಕೊಹ್ಲಿ ಟೆಸ್ಟ್‌ ಪಂದ್ಯಗಳಲ್ಲಿ ಒಟ್ಟು 30 ಶತಕಗಳನ್ನು ಬಾರಿಸಿದ್ರೆ, ಟಿ20 ಪಂದ್ಯಗಳಲ್ಲಿ ಒಟ್ಟು 1 ಶತಕ ಸಿಡಿಸಿದ್ದಾರೆ. ವಿರಾಟ್‌ ಕೊಹ್ಲಿ ಒಟ್ಟು ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಬರೋಬ್ಬರಿ 83 ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ : ವಿಶ್ವಕಪ್‌ ಪಂದ್ಯಾವಳಿ ವೇಳಾಪಟ್ಟಿ ಪ್ರಕಟ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಲ್ಲ ಒಂದೇ ಒಂದು ಪಂದ್ಯ

Virat Kohli World Record :100 ಶತಕದ ದಾಖಲೆ ಬರೆಯುತ್ತಾರಾ ಕೊಹ್ಲಿ ?

ಟೆಸ್ಟ್‌, ಏಕದಿನ ಹಾಗೂ ಟಿ20 ಮಾದರಿಯಲ್ಲಿ ಸಚಿನ್‌ ತೆಂಡೂಲ್ಕರ್‌ ಒಟ್ಟು 100 ಶತಕ ಬಾರಿಸಿದ್ದಾರೆ. ಟೆಸ್ಟ್‌ನಲ್ಲಿ 51, ಏಕದಿನದಲ್ಲಿ 49 ಶತಕ ಬಾರಿಸಿದ್ದಾರೆ. ಸದ್ಯ ವಿಶ್ವದಲ್ಲಿಯೇ ಸಚಿನ್‌ ಅತೀ ಹೆಚ್ಚು ಶತಕ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಸದ್ಯ ವಿರಾಟ್‌ ಕೊಹ್ಲಿ 83 ಶತಕ ಬಾರಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಲು ಕೊಹ್ಲಿಗೆ 17 ಶತಕದ ಅಗತ್ಯವಿದೆ.

ಅತೀ ಹೆಚ್ಚು ಶತಕ ಬಾರಿಸಿದ ಆಟಗಾರರ ಪೈಕಿ ರಿಕಿಪಾಂಟಿಂಗ್‌ 71 ಶತಕ ಬಾರಿಸುವ ಮೂಲಕ 3ನೇ ಸ್ಥಾನದಲ್ಲಿದ್ರೆ, ಕುಮಾರ ಸಂಗಕ್ಕಾರ 63 ಶತಕದೊಂದಿಗೆ 4ನೇ ಸ್ಥಾನ ಹಾಗೂ ಜಾಕ್‌ ಕಾಲಿಸ್‌ 2 ಶತಕಗಳೊಂದಿಗೆ 5ನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ : ಭಾರತ ಏಕದಿನ ತಂಡಕ್ಕೆ ಕೆಎಲ್‌ ರಾಹುಲ್‌ ನಾಯಕ

Virat Kohli World Record 52 century in ODI cricket IND vs SA ODI Live

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories