ಕಾರು- ಟ್ಯಾಂಕರ್ ಢಿಕ್ಕಿ : ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

0

ಪುತ್ತೂರು : ಕಾರು ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಉಪನ್ಯಾಸಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ. ಜೈನಿ ಶಾಜಿ (30) ಮತ್ತು ಜಿಸನ್ (40) ಎಂದು ಗುರುತಿಸಲಾಗಿದೆ. ಜೈನಿ ಶಾಜಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ರೆ, ಜೀಸನ್ ಧರ್ಮಗುರುದೀಕ್ಷೆ ಪಡೆಯಲು ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಮೃತರಿಬ್ಬರೂ ಅಣ್ಣ ತಂಗಿಯಾಗಿದ್ದು, ತಮ್ಮ ಕಾರಿನಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಎದುರಿನಿಂದ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಈ ಪೈಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ, ಕಾರಿನಲ್ಲಿದ್ದ ವಿದ್ಯಾರ್ಥಿ ಶರ್ವಿನ್ ಶಾಜಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರೊ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.