ಕೋಟ ಡಬಲ್ ಮರ್ಡರ್ ಪ್ರಕರಣ : ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

0

ಉಡುಪಿ : ಕೋಟದಲ್ಲಿ ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಹೈಕೋರ್ಟ್ ನೀಡಿದ್ದ ಷರತ್ತುಬದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠ ವಜಾಗೊಳಿಸಿದೆ.
2019ರ ಜನವರಿ 26 ರಂದು ಯತೀಶ್ ಕಾಂಚನ್ ಹಾಗೂ ಭರತ್ ಎಂಬವರ ಬರ್ಭರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 18 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಆರೋಪಿಯಾಗಿರೋ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆಯೇ ಹತ್ಯೆಯಾದ ಭರತ್ ತಾಯಿ ಪಾರ್ವತಿ ಸುಪ್ರೀಂ ಕೋರ್ಟ್ ಕದತಟ್ಟಿದ್ದಾರೆ. ವಾದ ವಿವಾದ ಆಲಿಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣ ಕರಾವಳಿಯಲ್ಲಿ ಸಂಚಲನ ಮೂಡಿಸಿತ್ತು. ಪ್ರಕರಣದಲ್ಲಿ ಪೊಲೀಸರು ಕೂಡ ಶಾಮೀಲಾಗಿದ್ದರು. ಈ ಹಿನ್ನೆಲೆಯಲ್ಲಿ ಜೋಡಿ ಕೊಲೆ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಂಡಿತ್ತು. ಕೊಲೆ ಪ್ರಕರಣದ ಆರೋಪಿಯಾಗಿರೋ ರಾಘವೇಂದ್ರ ಕಾಂಚನ್ ಅವರನ್ನು ಆರೋಪಿಯನ್ನಾಗಿ ಮಾಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೆಳ ನ್ಯಾಯಾಲಯದಲ್ಲಿ ಜಾಮೀನು ದೊರೆಯದಿದ್ದ ಕಾರಣಕ್ಕೆ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಹೈಕೋರ್ಟಿನ ಮೊರೆ ಹೋಗಿ ಅಲ್ಲಿ ಶರತ್ತು ಬದ್ದ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ಬಳಿಕ ಆರು ಆರೋಪಿಗಳಿಗೆ ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದನ್ನೇ ಪ್ರಶ್ನಿಸಿ ಭರತ್ ತಾಯಿ ಪಾರ್ವತಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಸುದೀರ್ಘ ಮೂರು ತಿಂಗಳುಗಳ ಕಾಲ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಅರುಣ್ ಮಿಶ್ರಾ ಹಾಗೂ ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಸೋಮವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು ಕೆಟಗರಿ 1437ರಲ್ಲಿ ಜಾಮೀನು ವಜಾಗೊಳಿ ಆದೇಶ ಹೊರಡಿಸಿದೆ. ಈ ಮೂಲಕ ಗ್ರಾಮೀಣ ಪ್ರದೇಶದ ಪ್ರಕರಣವೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಂತಾಗಿದೆ.

Leave A Reply

Your email address will not be published.