ನವದೆಹಲಿ : ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್ ಹೊರಡಿಸಿದೆ.
ನಿರ್ಭಯಾ ಅತ್ಯಾಚಾರಿಗಳ ವಿರುದ್ಧ ಹೊಸದಾಗಿ ಡೆತ್ ವಾರೆಂಟ್ ಹೊರಡಿಸಬೇಕೆಂದು ದೆಹಲಿ ನ್ಯಾಯಾಲಯವನ್ನು ತಿಹಾರ್ ಜೈಲು ಕೋರಿತ್ತು. ಅತ್ಯಾಚಾರಿಗಳ ಪೈಕಿ ಅಪರಾಧಿಯಾಗಿರೋ ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾದಾನದ ಅರ್ಜಿಯನ್ನು ರಾಷ್ಟ್ರಪತಿ ತಿರಸ್ಕರಿಸಿದ ಬಳಿಕ ಸಂಜೆ 4-30ರೊಳಗೆ ಜೈಲಿನ ಅಧಿಕಾರಿಗಳಿಗೆ ನಿರ್ದೇಶಿಸುವುದಾಗಿ ಅರೊರಾದ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ತಿಳಿಸಿದ್ದರು. ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಕ್ಷಮಾಧಾನದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿರುವುದಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಇರ್ಪಾನ್ ಅಹ್ಮದ್ ನ್ಯಾಯಾಲಯದ ಗಮನಕ್ಕೆ ತಂದರು. ಮುಕೇಶ್ ಕುಮಾರ್ ಸಿಂಗ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಹಿಂದೆ ನಿಗದಿಯಾಗಿದ್ದ ಜನವರಿ 22ರ ಬದಲಿಗೆ ಫೆಬ್ರವರಿ 1 ರಂದು ಗಲ್ಲು ಶಿಕ್ಷೆಯನ್ನು ನಿಗದಿಪಡಿಸಿ ತೀರ್ಪು ಪ್ರಕಟಿಸಿತು.
ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ : ಹೊಸ ಡೆತ್ ವಾರೆಂಟ್ ಜಾರಿ
- Advertisement -