ಮಂಗಳೂರು : ಇತ್ತೀಚಿಗಷ್ಟೇ ಉದ್ಘಾಟನೆಗೊಂಡಿದ್ದ ಪಂಪ್ ವೆಲ್ ಪ್ಲೈಓವರ್ ನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಆಲ್ಟೋ ಹಾಗೂ ರೆನಾಲ್ಟ್ ಡಸ್ಟರ್ ಕಾರು ಮಖಾಮುಖಿ ಢಿಕ್ಕಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಸರಗೋಡಿನಿಂದ ಉಡುಪಿಯ ಕಡೆಗೆ ಹೋಗುತ್ತಿದ್ದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.

ನಂತರ ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದ ಡಸ್ಟರ್ ಕಾರಿಗೆ ಢಿಕ್ಕಿಯಾಗಿದ್ದು, ಆಲ್ಟೋ ಕಾರ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.