ಬಾಂಬರ್ ಆದಿತ್ಯ ರಾವ್ ನನ್ನು ಮಂಗಳೂರು ಕರೆತಂದ ಪೊಲೀಸರು

0

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ನನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದಿರೋ ಎಸಿಪಿ ನೇತೃತ್ವದ ಪೊಲೀಸರ ತಂಡ ಆರೋಪಿ ಆದಿತ್ಯ ರಾವ್ ನನ್ನು ಪಣಂಬೂರಿನಲ್ಲಿರೋ ಎಸಿಪಿ ಕಚೇರಿಗೆ ಕರೆದೊಯ್ದಿದ್ದಾರೆ.
ಎಸಿಪಿ ಕಚೇರಿಯಲ್ಲಿಯೇ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರೋ ಕುರಿತು ಪೊಲೀಸರು ವಿಚಾರಣೆಯನ್ನು ನಡೆಸಲಿದ್ದಾರೆ. ಆದಿತ್ಯ ರಾವ್ ನನ್ನು ಕರೆತರೋ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಅಲ್ಲದೇ ಬಿಗಿ ಪೊಲೀಸ್ ಭದ್ರತೆಯಲ್ಲಿಯೇ ಆರೋಪಿಯನ್ನು ಪಣಂಬೂರಿಗೆ ಕರೆದೊಯ್ಯಲಾಗಿದೆ.

ಆರೋಪಿ ಆದಿತ್ಯ ರಾವ್ ನನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಕರೆತಂದಿರೋ ವಿಡಿಯೋ :

https://www.facebook.com/kan.newsnext.live/videos/780502422453821/?modal=admin_todo_tour
Leave A Reply

Your email address will not be published.