ಬೆಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರೋ ಬೆನ್ನಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದ್ದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರಯಾಣಿಕರು ಸಹಪ್ರಯಾಣಿಕರ ಮೇಲೂ ಹದ್ದಿನಕಣ್ಣು ಇರಿಸಲಾಗಿದೆ.

ಕೇವಲ ವಿಮಾನ ನಿಲ್ದಾಣ ಮಾತ್ರವಲ್ಲದೇ ಮೆಟ್ರೋ ಸ್ಟೇಷನ್, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿಯೂ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಹೈ ಅಲರ್ಟ್ ಘೋಷಿಸಿದೆ.