ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಲ್ಯಾಪ್ ಟಾಪ್ ಬ್ಯಾಗ್ ನಲ್ಲಿ ಸಜೀವ ಬಾಂಬ್ ಇರಿಸಲಾಗಿದ್ದು, ಬಾಂಬ್ ನಿಷ್ಕ್ರೀಯದಳದ ಅಧಿಕಾರಿಗಳು ತಪಾಸಣೆಯನ್ನು ನಡೆಸಲಾಗುತ್ತಿದೆ.

ಆಟೋದಲ್ಲಿ ಬಂದಿದ್ದ ವ್ಯಕ್ತಿಯೋರ್ವ ವಿಮಾನನಿಲ್ದಾಣದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಇರಿಸಿ ನಾಪತ್ತೆಯಾಗಿದ್ದಾನೆ. ಬ್ಯಾಗ್ ನಲ್ಲಿ ಸುಮಾರು 10 ಕೆ.ಜಿ. ತೂಕದ ಸುಧಾರಿತ ಸಜೀವ ಬಾಂಬ್ ಇರುವುದು ಪತ್ತೆಯಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಅವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಸಜೀವ ಬಾಂಬ್ ನ್ನು ನಿಷ್ಕ್ರೀಯಗೊಳಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.

ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಆಟೋದಲ್ಲಿ ಬಂದು ಶಂಕಿತರರು ಬ್ಯಾಗ್ ಇರಿಸಿ ಪರಾರಿಯಾಗಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಂಬ್ ಪತ್ತೆಯಾದ ಕೂಡಲೇ ಸುರಕ್ಷಿತ ಸ್ಥಳಕ್ಕೆ ಅದನ್ನು ರವಾನಿಸಿ ಪ್ರೋಟೋ ಕಾಲ್ ಪ್ರಕಾರ ಬಾಂವ್ ಪ್ರೈಪ್ ವೆಹಿಕಲ್ ನಲ್ಲಿ ಇರಿಸಿದ್ದರು. ಅನುಮಾನಾಸ್ಪದ ಬ್ಯಾಗ್ ನಲ್ಲಿ ಪತ್ತೆಯಾಗಿರೋದು ಸಜೀವ ಬಾಂಬ್ ಅನ್ನೋದು ಖಚಿತವಾಗುತ್ತಿದ್ದಂತೆಯೇ ಅನಾಹುತ ತಪ್ಪಿಸಲು ರಕ್ಷಣಾ ಸಿಬ್ಬಂಧಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಜೀವ ಬಾಂಬ್ ನ್ನು ವಾಹನದೊಳಗೆ ನಿಷ್ಕ್ರೀಯಗೊಳಿಸುವ ಕಾರ್ಯದಲ್ಲಿ ಸಿಬ್ಬಂಧಿಗಳು ತೊಡಗಿದ್ದಾರೆ.