- Advertisement -
ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಬೆನ್ನಲ್ಲೇ ರೈಲ್ವೆ ಪೊಲೀಸರು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ನಗರದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಆದ್ರೆ ರೈಲ್ವೆ ಇಲಾಖೆಯ ಅಧಿಕಾರಿಗಳು ಈ ಮಾಹಿತಿಯನ್ನು ಖಚಿತ ಪಡಿಸಿಲ್ಲ.