ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಹಿನ್ನೆಲೆ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಮಾಹಿತಿಯನ್ನು ಕಲೆಹಾಕುತ್ತಿದ್ದು, ಕೆಲವೇ ಸಮಯದಲ್ಲಿ ಎನ್‌ಐಎ ತಂಡ ಮಂಗಳೂರಿಗೆ ಆಗಮಿಸೋ ಸಾಧ್ಯತೆಯಿದೆ.
ಆಟೋದಲ್ಲಿ ಬಂದಿದ್ದ ವ್ಯಕ್ತಿಯೋರ್ವ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್ ಬಳಿಯಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಬಿಟ್ಟು ಹೋಗಿದ್ದ. ಪರಿಶೀಲಿಸಿದಾಗ ಬ್ಯಾಗ್ ನಲ್ಲಿ ಸಜೀವ ಬಾಂಬ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಜೀವ ಬಾಂಬ್ ನ್ನು ನಿಷ್ಕ್ರೀಯಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಘಟನೆಯ ಕುರಿತು ಎನ್ ಐಎ ಮಾಹಿತಿಯನ್ನು ಕೋರಿದೆ. ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಮೊಕ್ಕಾಂ ಹೂಡಿದ್ದು ಕೆಲವೇ ಹೊತ್ತಿನಲ್ಲಿ ಎನ್‌ಐಎ ತಂಡ ಆಗಮಿಸುವ ಸಾಧ್ಯತೆ ಇದೆ.
ಸಜೀವ ಬಾಂಬ್ ಪತ್ತೆ : ಮಂಗಳೂರಿಗೆ ಎನ್‌ಐಎ ತಂಡ..?
- Advertisement -