130 students are sick: ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ವಿಷ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥ

ಪಲ್ನಾಡು: (130 students are sick) ಜಿಲ್ಲೆಯ ರಾಮಕೃಷ್ಣಾಪುರದ ಗುರುಕುಲ ಶಾಲೆಯಲ್ಲಿ ವಿಷ ಆಹಾರ ಸೇವಿಸಿ 130 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಗುರುಕುಲದಲ್ಲಿ 650 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಬೆಳಿಗ್ಗೆಯಿಂದಲೇ ಕೆಲವು ಮಕ್ಕಳು ಹೊಟ್ಟೆನೋವಿನಿಂದ ಬಳಲುತ್ತಿದ್ದು, ಮಧ್ಯಾಹ್ನದ ಊಟದ ನಂತರ ಹಲವು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ತೀವ್ರ ವಾಕರಿಕೆ ಮತ್ತು ತಲೆತಿರುಗುವಿಕೆಯಿಂದ ಬಳಲುತ್ತಿದ್ದು, ಕೂಡಲೇ ನೂರಕ್ಕು ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಮೂಲಗಳ ಪ್ರಕಾರ, ಸೋಮವಾರ ಬೆಳಿಗ್ಗೆ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಮತ್ತು ವಾಕರಿಕೆ ಬಗ್ಗೆ ದೂರು ನೀಡಿದ್ದಾರೆ. ನಂತರ ಶಾಲೆಯ ಆರೋಗ್ಯಾಧಿಕಾರಿಗಳು ಅಗತ್ಯ ಔಷಧಗಳನ್ನು ನೀಡಿದರು. ಆದರೂ ಕೂಡ ಮಕ್ಕಳ ಆರೋಗ್ಯ ಸ್ಥಿತಿ ಸುಧಾರಿಸದೇ ಇದ್ದಾಗ, ವಿದ್ಯಾರ್ಥಿಗಳನ್ನು ಸತ್ತೇನಪಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಜಂಟಿ ಕಲೆಕ್ಟರ್ ಶ್ಯಾಮ್ ಪ್ರಸಾದ್ ಆಸ್ಪತ್ರೆಗೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಚಿಕಿತ್ಸೆ ಪಡೆಯುತ್ತಿರುವ ಎಂಟನೇ ತರಗತಿ ವಿದ್ಯಾರ್ಥಿನಿ ಮಾತನಾಡಿ, ಭಾನುವಾರ ಮಧ್ಯಾಹ್ನ ಕೋಳಿ ಕರಿ ಮತ್ತು ರಾತ್ರಿ ಊಟಕ್ಕೆ ಬದನೆಕಾಯಿ ಕರಿ ನೀಡಿದ್ದಾರೆ. ನನ್ನ ಜೊತೆಗೆ ಇತರ ಕೆಲವು ವಿದ್ಯಾರ್ಥಿಗಳು ಸೋಮವಾರ ಬೆಳಿಗ್ಗೆಯಿಂದ ಹೊಟ್ಟೆ ನೋವು ಮತ್ತು ವಾಕರಿಕೆಯಿಂದ ಬಳಲುತ್ತಿದ್ದರು. ಆದರೆ ಸೋಮವಾರ ಮಧ್ಯಾಹ್ನದ ಊಟದ ನಂತರ ಹಲವಾರು ವಿದ್ಯಾರ್ಥಿಗಳು ತೀವ್ರ ವಾಕರಿಕೆ ಮತ್ತು ತಲೆತಿರುಗುವಿಕೆಯಿಂದ ಬಳಲುತ್ತಿದ್ದರು ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದಿದ್ದಾರೆ.

ಸಚಿವ ಅಂಬಟಿ ರಾಂಬಾಬು, ಜಿಲ್ಲಾಧಿಕಾರಿ ಶಿವಶಂಕರ ಲೊತೇಟಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರಿಗೆ ನೀಡುತ್ತಿರುವ ಊಟದ ಬಗ್ಗೆ ವಿಚಾರಿಸಿದರು. ವರದಿ ಮಾಧ್ಯಮದವರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆತಂಕ ಪಡಬೇಡಿ ಎಂದು ಪೋಷಕರಿಗೆ ಮನವಿ ಮಾಡಿದರು.

ಇದನ್ನೂ ಓದಿ : Road accident-men death: ರಸ್ತೆ ಅಪಘಾತದಲ್ಲಿ ಯುವಕ ಸಾವು: ಗೋರಕ್ಷಕರ ವಿರುದ್ದ ಕುಟುಂಬದವರ ಆರೋಪ

ಇದನ್ನೂ ಓದಿ : Geyser gas leak : ಗೀಸರ್ ಗ್ಯಾಸ್ ಸೋರಿಕೆ : ನವವಿವಾಹಿತೆ ಸಾವು

ಆಸ್ಪತ್ರೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿಶೇಷ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದರು.”130 ವಿದ್ಯಾರ್ಥಿಗಳಲ್ಲಿ, 20 ವಿದ್ಯಾರ್ಥಿಗಳಿಗೆ ಜ್ವರವಿದೆ, ಮತ್ತು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ IV ದ್ರವಗಳನ್ನು ನೀಡಲಾಗುತ್ತದೆ, ಆದರೆ ಇತರರು ಪರಿಸ್ಥಿತಿಯಿಂದ ಭಯಭೀತರಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ” ಎಂದೂ ಜಿಲ್ಲಾಧಿಕಾರಿ ಹೇಳಿದ್ದಾರೆ.

ಘಟನೆಗೆ ಕಾರಣಗಳನ್ನು ಕಂಡುಹಿಡಿಯಲು ಆಹಾರ ನಿಯಂತ್ರಕರು, ವಿಶೇಷ ಜಿಲ್ಲಾಧಿಕಾರಿ, ತಜ್ಞ ವೈದ್ಯರು, ಕಲ್ಯಾಣ ಇಲಾಖೆಯ ಯೋಜನಾ ನಿರ್ದೇಶಕರು ಸೇರಿದಂತೆ ಸಮಿತಿಯನ್ನು ರಚಿಸಲಾಗಿದೆ.

130 students are sick: 130 students are sick after eating poisoned food in Ramakrishnapur’s Gurukula School.

Comments are closed.