ಸಾಕು ನಾಯಿ ಬೊಗಳಿದ್ದಕ್ಕೆ 15 ವರ್ಷದ ಬಾಲಕನಿಗೆ ಚಾಕು ಇರಿತ

Crime News: ಮುಂಬೈ: ಸಾಕು ನಾಯಿ ಬೊಗಳಿದ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಗುಂಪೊಂದು ಅಪ್ರಾಪ್ತ ಬಾಲಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ಮುಂಬೈನ ಅಂತೋಪ್ ಹಿಲ್ ಪ್ರದೇಶದಲ್ಲಿ ನಡೆದಿದೆ. ಜನವರಿ 8 ರಂದು ಈ ಘಟನೆ ಸಂಭವಿಸಿದೆ. ಹದಿನೈದು ವರ್ಷದ ಬಾಲಕ ತನ್ನ ಸಾಕು ನಾಯಿಯೊಂದಿಗೆ ಲಿಫ್ಟ್‌ಗಾಗಿ ಕಾಯುತ್ತಿದ್ದಾಗ, ಲಿಫ್ಟ್‌ನಿಂದ ಹೊರಬರುತ್ತಿದ್ದ ಜನರ ಗುಂಪನ್ನು ನೋಡಿ ನಾಯಿ ಬೊಗಳಿದೆ. ಈ ಸಣ್ಣ ವಿಷಯವು ಮಾತಿನ ಚಕಮಕಿಗೆ ಕಾರಣವಾಗಿ, ನಂತರ ವಿಕೋಪಕ್ಕೆ ತಿರುಗಿದೆ.

ನಡೆದಿದ್ದೇನು?
ಜಗಳ ಬಿಡಿಸಲು ಪ್ರಯತ್ನಿಸುತ್ತಿದ್ದಾಗ 25 ವರ್ಷದ ನಿತಿನ್ ದಿಕ್ಕಾ ಎಂಬಾತ ಸ್ಥಳಕ್ಕೆ ಬಂದು ಬಾಲಕನ ಮೇಲೆ ಮರದ ಕೋಲಿನಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಅಷ್ಟಕ್ಕೇ ನಿಲ್ಲದೆ ಬಾಲಕನಿಗೆ ಗುದ್ದಿ, ಒದ್ದು ತಲೆಗೆ ತೀವ್ರವಾಗಿ ಗಾಯಗೊಳಿಸಿದ್ದಾನೆ. ಈ ಗಲಾಟೆಯ ನಡುವೆ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಸಂತ್ರಸ್ತ ಬಾಲಕ ಬಿಡ್ಲಾನ್ ತನಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಿದ್ದಾನೆ.

ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಕರಾವಳಿ ಪ್ರಗತಿಯೇ ನಮ್ಮ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತೋಪ್ ಹಿಲ್ ಪೊಲೀಸರು ಒಟ್ಟು ಆರು ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಹಾಗೂ ಕ್ರಿಮಿನಲ್ ಕಾನೂನು ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

Related Stories