ಉಡುಪಿ : ಫೇಸ್‌ಬುಕ್‌ನಲ್ಲಿ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವನ ಪರಿಚಯವಾಗಿತ್ತು. ನಂತರದ ಪರಿಚಯ ಸ್ನೇಹಕ್ಕೆ ತಿರುಗಿತ್ತು. ತಾನು ವೈದ್ಯನೆಂದು ಹೇಳಿಕೊಂಡಿದ್ದ ವ್ಯಕ್ತಿ ಮಹಿಳೆಯಿಂದ ಬರೋಬ್ಬರಿ 19 ಲಕ್ಷ ರೂಪಾಯಿ ಹಣ ಪಡೆದುಕೊಂಡು ದೋಖಾ ಮಾಡಿದ್ದಾನೆ.
ಉಡುಪಿ ಮೂಲದ ಲಿನೆಟ್ ಸೀಮಾ ರೋಡ್ರಿಗಸ್ (38 ವರ್ಷ) ಕುವೈತ್‌ನಲ್ಲಿ ಉದ್ಯೋಗದಲ್ಲಿದ್ದರು. ಫೇಸ್‌ಬುಕ್‌ನಲ್ಲಿ ಡಾ ಆಂಡ್ರಿವ್ ಫೆಲಿಕ್ಸ್ ಅನ್ನೋ ವ್ಯಕ್ತಿಯ ಪರಿಚಯವಾಗಿದೆ. ನಂತರದಲ್ಲಿ ಇಬ್ಬರ ಪರಿಚಯ ಸ್ನೇಹಕ್ಕೆ ತಿರುಗಿ ಮೊಬೈಲ್ ನಂಬರ್ ಹಂಚಿಕೊಂಡಿದ್ದಾರೆ. ಈ ವೇಳೆಯಲ್ಲಿ ಆರೋಪಿ ತಾನು ವೈದ್ಯನೆಂದು ಪರಿಚಯ ಮಾಡಿಕೊಂಡಿದ್ದ.
ದೆಹಲಿಯಲ್ಲಿ ಫಾರ್ಮಸಿಯೊಂದನ್ನು ತೆರೆಯುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಹೀಗಾಗಿ ಡಾ.ಆಂಡ್ರಿವ್ ಫೆಲಿಕ್ಸ್ ಖಾತೆಗೆ ಬರೋಬ್ಬರಿ 19 ಲಕ್ಷ ರೂಪಾಯಿಯನ್ನು ಹಂತ ಹಂತವಾಗಿ ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದುಕೊಂಡ ಆರೋಪಿ ನಂತರದಲ್ಲಿ ಮಹಿಳೆಯ ಸಂಪರ್ಕವನ್ನೇ ಕಡಿತ ಮಾಡಿಕೊಂಡಿದ್ದಾನೆ.
ಇದೀಗ ಮಹಿಳೆ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯದ ಸೂಚನೆಯ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.