Bus falls into gorge:ಕಮರಿಗೆ ಉರುಳಿದ ಬಸ್ : 22 ಸಾವು, 6 ಮಂದಿಗೆ ಗಾಯ

ಉತ್ತರಾಖಂಡ್ : ಯಮುನೋತ್ರಿಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಕಮರಿಗೆ‌ ಉರುಳಿದ ( bus falls into gorge) ಪರಿಣಾಮ ಕನಿಷ್ಠ 22 ಜನರು (22 dead) ಸಾವನ್ನಪ್ಪಿದ್ದು, 6 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಯಮುನೋತ್ರಿಗೆ 28 ​​ಯಾತ್ರಿಕರ ಚಾರ್ ಧಾಮ್ ಯಾತ್ರೆಯನ್ನು ಹೊತ್ತೊಯ್ಯುತ್ತಿತ್ತು. ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಭೇಟಿ ನೀಡಿದ್ದು, ರಕ್ಷಣಾ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ. ಯಮುನೋತ್ರಿ ಜೊತೆಗೆ ಬದರಿನಾಥ, ಕೇದಾರನಾಥ, ಗಂಗೋತ್ರಿಯ ಪುಣ್ಯಕ್ಷೇತ್ರಗಳನ್ನು ಸಾಮಾನ್ಯವಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ.

ಉತ್ತರಾಖಂಡ ಮುಖ್ಯಮಂತ್ರಿ ಕಚೇರಿಯ ಪ್ರಕಾರ, ಸಿಎಂ ಪುಷ್ಕರ್ ಸಿಂಗ್ ಧಾಮಿ ಉತ್ತರಕಾಶಿ ಜಿಲ್ಲೆಯಲ್ಲಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಡೆಹ್ರಾಡೂನ್‌ನ ವಿಪತ್ತು ನಿಯಂತ್ರಣ ಕೊಠಡಿಯನ್ನು ತಲುಪಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಜತೆಗೆ ಪರಿಹಾರ ಹಾಗೂ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಯಮುನೋತ್ರಿಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಉತ್ತರಕಾಶಿಯಲ್ಲಿ ಕಮರಿಗೆ ಬಿದ್ದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, ಇದೀಗ ಮೃತರ ಕುಟುಂಬ ಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಯವರ ಕಚೇರಿ ಭಾನುವಾರ ಘೋಷಿಸಿದೆ.

ಇದನ್ನೂ ಓದಿ : Tuition Center Rape Case : ಟ್ಯೂಷನ್‌ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ

ಇದನ್ನೂ ಓದಿ : Kubra Sait : ನನ್ನನ್ನು ಚುಂಬಿಸಿದ ಬಳಿಕ ಕನ್ಯತ್ವ ಕಳೆದ : ಬೆಂಗಳೂರಿನ ಕರಾಳತೆ ಬಿಚ್ಚಿಟ್ಟ ನಟಿ ಕುಬ್ರಾ ಸೇಠ್

22 dead, 6 people injured after bus falls into gorge

Comments are closed.