3 year old boy death: ಪತಿ ಪತ್ನಿಯ ಜಗಳಕ್ಕೆ ಬಲಿಯಾಯ್ತು 3 ವರ್ಷದ ಕಂದ

ಉತ್ತರ ಪ್ರದೇಶ: (3 year old boy death) ಪತ್ನಿಯೊಂದಿಗೆ ಜಗಳವಾಡಿದ ಪತಿ ಕೋಪದ ಬರದಲ್ಲಿ ತನ್ನ ಮೂರು ವರ್ಷದ ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ನಂತರ ಹೊಲದಲ್ಲಿ ಹೂತು ಹಾಕಿದ ಘಟನೆ ಉತ್ತರ ಪ್ರದೇಶದ ಪತೇಪುರ್‌ ನಲ್ಲಿ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಕಂದಮ್ಮನನ್ನು ರಾಜ್‌ ( 3 ವರ್ಷ) ಎಂದು ಗುರುತಿಸಲಾಗಿದೆ.

ಆರೋಪಿ ಚಂದ್ರಕಿಶೋರ್‌ ಲೋಧಿ ರಾತ್ರಿಯ ವೇಳೆ ಮನೆಗೆ ಕಂಠಪೂರ್ತಿಯಾಗಿ ಕುಡಿದು ಬಂದಿದ್ದು, ಪತ್ನಿಯೊಂದಿಗೆ ಜಗಳವಾಡಲು ಪ್ರಾರಂಭಿಸಿದ್ದಾನೆ. ಕೊನೆಗೆ ಇಬ್ಬರ ಜಗಳ ಅತಿರೇಕಕ್ಕೇರಿದ್ದು, ಲೋಧಿ ಕೋಪದ ಭರದಲ್ಲಿ ತನ್ನ ಮೂರು ವರ್ಷದ ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ನಂತರ ಮಗನ ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ.

ಮಗನನ್ನು ಕಳೆದುಕೊಂಡ ಆರೋಪಿಯ ಪತ್ನಿ ಪತಿಯ ವಿರುದ್ದ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪತ್ನಿಯ ದೂರಿನ ಮೇರೆಗೆ ಆರೋಪಿ ಲೋಧಿಯನ್ನು ಪೊಲೀಸರು ಬಂಧಿಸಿದ್ದು, ಹೊಲದಲ್ಲಿ ಹೋತಿದ್ದ ಬಾಲಕನ ಮೃತದೇಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

” ಚಂದ್ರಕಿಶೋರ್ ಲೋಧಿ ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಮಗ ರಾಜ್‌ನನ್ನು ಕೊಡಲಿಯಿಂದ ಕೊಚ್ಚಿ ನಂತರ ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವೀರ್ ಸಿಂಗ್ ತಿಳಿಸಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಎಫ್‌ ಐ ಆರ್‌ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Auto driver murder: ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆಗೈದ ಪ್ರಯಾಣಿಕರು

ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆಗೈದ ಪ್ರಯಾಣಿಕರು

ನವದೆಹಲಿ: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಆಟೋ ಚಾಲಕನನ್ನು ಇರಿದು ಕೊಂದ ಘಟನೆ ದೆಹಲಿಯ ದ್ವಾರಕಾ ಸೆಕ್ಟರ್ 13 ರಲ್ಲಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದು, ಮಾರ್ಗ ಮಧ್ಯೆ ಆಟೋ ಚಾಲಕ ಮೃತಪಟ್ಟಿದ್ದಾನೆ.

ದ್ವಾರಕಾ ಸೆಕ್ಟರ್ 13 ರಲ್ಲಿ ನಡೆದ ಚೂರಿ ಇರಿತದ ಘಟನೆಯ ಬಗ್ಗೆ ಮಧ್ಯರಾತ್ರಿ 2 ಗಂಟೆಗೆ ಪೊಲೀಸರಿಗೆ ಪಿಸಿಆರ್ ಕರೆ ಬಂದಿದ್ದು, ಅಧಿಕಾರಿಗಳ ತಂಡವನ್ನು ತಕ್ಷಣವೇ ಅಪರಾಧ ಸ್ಥಳಕ್ಕೆ ಕಳುಹಿಸಲಾಗಿತ್ತು. ಸ್ಥಳಕ್ಕೆ ಪೊಲೀಸರು ತೆರಳುವ ವೇಳೆಯಲ್ಲಿ ಇಬ್ಬರು ಆಟೋ ಚಾಲಕನ ಕುತ್ತಿಗೆಗೆ ಇರಿಯುತ್ತಿದ್ದು, ಪೊಲೀಸರನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವ್ಯಕ್ತಿಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಆಟೋ ಚಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ : Murder for electricity bill: 3,000 ವಿದ್ಯುತ್ ಬಿಲ್ ಪಾವತಿಸದಿದ್ದಕ್ಕೆ ವ್ಯಕ್ತಿಯ ಕೊಲೆ

ಇದನ್ನೂ ಓದಿ : Drunk and Drive: ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಟೆಂಪೋ ಚಲಾಯಿಸಿದ ಚಾಲಕ: ಬೈಕ್ ಸವಾರನಿಂದ ಕಪಾಳಮೋಕ್ಷ

3 year old boy death: 3 year old boy died due to husband and wife quarrel

Comments are closed.