ಜೈಪುರ : 35 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಕಾಮುಕರು ನಂತರ ಮಹಿಳೆಯನ್ನು ಕೊಲೆಗೈದಿರುವ ಘಟನೆ ರಾಜಸ್ಥಾನದ ದೌಸಾ ಎಂಬಲ್ಲಿ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮಹಿಳೆ ಬೆಳಗಿನ ವೇಳೆಯಲ್ಲಿ ಜೈಪುರದಿಂದ ದೌಸಾಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಳು. ಪೋಷಕರ ಮನೆ ಸಮೀಪದ ಬಸ್ ನಿಲ್ದಾಣದಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ಈ ವೇಳೆಯಲ್ಲಿ ಕಾರಿನಲ್ಲಿ ಬಂದ ಆರೋಪಿಗಳು ಲಿಫ್ಟ್ ಕೊಡುವುದಾಗಿ ನಂಬಿಸಿ ಮಹಿಳೆಯನ್ನು ಕಾರಿನೊಳಗೆ ಕೂರಿಸಿಕೊಂಡಿದ್ದಾರೆ.
ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಘಟನೆಯ ಬಗ್ಗೆ ಯಾರಿಗೂ ತಿಳಿಯ ಬಾರದು ಅನ್ನೋ ಕಾರಣಕ್ಕೆ ಮಹಿಳೆಯನ್ನು ಹತ್ಯೆಗೈದು, ಸಮೀಪದಲ್ಲಿರುವ ಬಾವಿಗೆ ಶವವನ್ನು ಎಸೆದು ಪರಾರಿಯಾಗಿದ್ದಾರೆ. ಬಾವಿಯಲ್ಲಿ ಶವ ದೊರೆತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯವನ್ನು ಮುಂದುವರಿಸಿದ್ದೇವೆ ಎಂದು ದೌಸಾದ ಪೊಲೀಸ್ ಅಧೀಕ್ಷಕರಾದ ರಾಜ್ ಕುಮಾರ್ ಗುಪ್ತಾ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಇದನ್ನೂ ಓದಿ : ತಣ್ಣೀರುಬಾವಿ ಬೀಚ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ ಐವರು ವಿದ್ಯಾರ್ಥಿಗಳ ರಕ್ಷಣೆ
ಇದನ್ನೂ ಓದಿ : ಸಹಾಯಕ ಪ್ರಾಧ್ಯಾಪಕ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿ ಬಂಧನ
35 years Woman Gang Rape murdered in Rajasthan Dausa 1 accused Arrested