The Brick Kiln Collapsed : ಇಟ್ಟಿಗೆ ಭಟ್ಟಿ ಕುಸಿದು ಐವರ ಸಾವು, 7 ಮಂದಿಗೆ ಗಂಭೀರ ಗಾಯ

ನವದೆಹಲಿ: ಶುಕ್ರವಾರ ಇಟ್ಟಿಗೆ ಗೂಡುಗಳ ಚಿಮಣಿ ಕುಸಿದು (The Brick Kiln Collapsed ) 12 ವರ್ಷದ ಮಗು ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ಸದ್ಯ ಗಾಯಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.

ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಶುಕ್ರವಾರ ಇಟ್ಟಿಗೆ ಗೂಡುಗಳ ಚಿಮಣಿ ಕುಸಿದು 12 ವರ್ಷದ ಮಗು ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಇದಕ್ಕೂ ಮೊದಲು ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಆದರೆ ಶನಿವಾರ ಬೆಳಿಗ್ಗೆ ಸಾವಿನ ಸಂಖ್ಯೆ ಐದಕ್ಕೆ ಏರಿದೆ ಎಂದು ಕ್ಯಾಚಾರ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ನುಮಲ್ ಮಹತ್ತಾ ತಿಳಿಸಿದರು. ಕ್ಯಾಚಾರ್ ಜಿಲ್ಲೆಯ ಸಿಲ್ಚಾರ್ ಪಟ್ಟಣದಿಂದ ಸುಮಾರು 29 ಕಿಮೀ ದೂರದಲ್ಲಿರುವ ಕಟಿಗೋರಾ ವಿಧಾನಸಭಾ ಕ್ಷೇತ್ರದ ಕಲೈನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಾಟಿಗೋರ ವಿಧಾನಸಭಾ ಕ್ಷೇತ್ರದ ಶಾಸಕ ಖಲೀಲ್ ಉದ್ದೀನ್ ಮಜುಂದಾರ್ ಮಾತನಾಡಿ, ಇಟ್ಟಿಗೆ ಭಟ್ಟಿಯ ಚಿಮಣಿ ಕುಸಿದು ಹಲವರ ಮೇಲೆ ಬಿದ್ದಿದೆ ಎಂದಿದ್ದಾರೆ.

ಇದನ್ನೂ ಓದಿ : Attempt to suicide: ಹೋಮ್‌ ವರ್ಕ್‌ ಮಾಡದಿದ್ದಕ್ಕೆ ಶಿಕ್ಷಕರಿಂದ ಕಿರುಕುಳ: ಶಾಲಾ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿ, ಸ್ಥಿತಿ ಗಂಭೀರ

ಇದನ್ನೂ ಓದಿ : Live in Relationship Murder Case‌ : ಲಿವ್‌ ಇನ್‌ ರಿಲೇಷನ್‌ ಶಿಪ್‌ : ಪ್ರಿಯತಮೆಯನ್ನು ಚಾಕುನಿಂದ ಇರಿದು ಕೊಂದ ಪ್ರಿಯಕರ

ಇದನ್ನೂ ಓದಿ : Student Rape: ವಿದ್ಯಾರ್ಥಿನಿಯನ್ನು ಅಪಹರಿಸಿ ಯುವಕರಿಂದ ಅತ್ಯಾಚಾರ: ಆರೋಪಿಗಳಿಗಾಗಿ ಹುಡುಕಾಟ

“ಘಟನೆಯಲ್ಲಿ ಕೆಲವು ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದೇವೆ. ಸ್ಥಳೀಯರೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ನಾನು ವೈಯಕ್ತಿಕವಾಗಿ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಿಗೆ ಕರೆ ಮಾಡಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಮಜುಂದರ್ ಹೇಳಿದ್ದಾರೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ಆರಂಭಿಸಿದ್ದಾರೆ.

5 killed, 7 seriously injured in brick kiln collapse

Comments are closed.