Chemical factory : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ : 6 ಮಂದಿ ಕಾರ್ಮಿಕರು ಸಾವು

ಸೂರತ್ : ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ (Chemical factory) ಆರು ಮಂದಿ ಸಾವನ್ನಪ್ಪಿದ್ದು, ಹಲವು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಭರೂಚ್ (Gujarat’s Bharuch) ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದೆ. ಅಹಮದಾಬಾದ್‌ನಿಂದ ಸುಮಾರು 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಮುಂಜಾನೆ 3 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

ಕಾರ್ಖಾನೆಯ ರಿಯಾಕ್ಟರ್‌ ಬಳಿಯಲ್ಲಿ ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಾರ್ಮಿಕರೆಲ್ಲರು ದ್ರಾವಕ ಬಟ್ಟಿ ಇಳಿಸುವ ಕಾರ್ಯ ನಡೆಸುತ್ತಿದ್ದ ವೇಳೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. ರಿಯಾಕ್ಟರ್ ಸ್ಫೋಟದಿಂದ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಮೇಲ್ನೋಟಕ್ಕೆ ರಾಸಾಯನಿಕ ಸೋರಿಕೆಯಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಕುರಿತು ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ : ಮಗಳ ಮೇಲೆ ನಿರಂತರ ಅತ್ಯಾಚಾರ : ಪಾಪಿ ತಂದೆಗೆ 25 ವರ್ಷ ಜೈಲು ಶಿಕ್ಷೆ

ಇದನ್ನೂ ಓದಿ :  ಎಸಿ ಸ್ಪೋಟ, ಒಂದೇ ಕುಟುಂಬದ ನಾಲ್ವರ ದುರ್ಮರಣ

6 killed in blast at chemical factory in Gujarat’s Bharuch

Comments are closed.