9 year girl raped: 9 ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ: ದೂರು ದಾಖಲು

ಮಥುರಾ: (9 year girl raped) ಒಂಬತ್ತು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ ಮಥುರಾದಲ್ಲಿ ನಡೆದಿದೆ. ಕೃತ್ಯವೆಸಗಿ ಬಾಲಕಿಗೆ ಬ್ಲ್ಯಾಕ್‌ ಮೇಲ್‌ ಮಾಡಲು ಕೃತ್ಯದ ವಿಡಿಯೋವನ್ನು ಸಹ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ಘಟನೆ ನಡೆದಿದ್ದು, ನೆರೆಹೊರೆಯ ಅಪ್ರಾಪ್ತ ಬಾಲಕರು ಬಾಲಕಿ ಒಬ್ಬಳೆ ಮನೆಯಲ್ಲಿರುವಾಗ ಮನೆಗೆ ನುಗ್ಗಿ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆಕೆ ಅದನ್ನು ತಡೆಯಲು ಪ್ರಯತ್ನಿಸಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಕೃತ್ಯದ ವಿಡಿಯೋ ಕೂಡ ಮಾಡಿಕೊಂಡಿದ್ದಾರೆ.

ಸಂತ್ರಸ್ತೆಯಲ್ಲಿ ಈ ಘಟನೆಯ ಬಗ್ಗೆ ಸಂಬಂದಿಕರಲ್ಲಿ ಅಥವಾ ಇನ್ನ್ಯಾರ ಬಳಿಯಾದರೂ ಹೇಳಿಕೊಂಡರೆ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ. ಸಂಬಂಧಿಕರು ಮನೆಗೆ ಬಂದಾಗ ಬಾಲಕಿ ನಡೆದ ವಿಚಾರವನ್ನು ಮನೆಯವರಲ್ಲಿ ಹೇಳಿಕೊಂಡಿದ್ದಾಳೆ. ಘಟನೆಯ ಬಗ್ಗೆ ತಿಳಿದ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದಾಗ ಮನೆಗೆ ನುಗ್ಗಿ ಬಾಲಕಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆಕೆ ತಡೆದಾಗ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಘಟನೆಯ ವೀಡಿಯೊವನ್ನು ಸಹ ಮಾಡಿದ್ದಾರೆ ಮತ್ತು ಸಂತ್ರಸ್ತೆ ಈ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂಬಂಧಿಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Father get suicide: ಕುಂದಾಪುರ : ಮಗು ಅನಾರೋಗ್ಯದಿಂದ ಸಾವು, ತಂದೆ ಆತ್ಮಹತ್ಯೆ

ಇದನ್ನೂ ಓದಿ : Inhuman behavior of husband: ಗರ್ಭಿಣಿ ಪತ್ನಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ಪತಿ : ಅಮಾನವೀಯ ವರ್ತನೆಗೆ ಬಾರೀ ಆಕ್ರೋಶ

ಇದನ್ನೂ ಓದಿ : Student hangout: ಉಡುಪಿ: ನೇಣಿಗೆ ಶರಣಾದ 6 ನೇ ತರಗತಿ ವಿದ್ಯಾರ್ಥಿನಿ

ಸದ್ಯ ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಸಂತ್ರಸ್ತೆಯ ಸಂಬ‍ಂಧಿಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ದ ಎಫ್‌ ಐ ಆರ್‌ ದಾಖಲಿಸಲಾಗಿದೆ ಎಂದು ಹೆದ್ದಾರಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಛೋಟೆ ಲಾಲ್ ತಿಳಿಸಿದ್ದಾರೆ.

9 year girl raped: 9 year girl raped by two minors: File a complaint

Comments are closed.