ಲಕ್ನೋ : ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿ ಲಕ್ನೋದಿಂದ ಜಾರ್ಖಂಡ್‌ಗೆ ಒಂದೇ ಕುಟುಂಬದ ಐದು ಮಂದಿ ಪ್ರಯಾಣಿಸುತ್ತಿದ್ದರು. ಕಾರು ಬಸ್ತಿ ಜಿಲ್ಲೆಯ ಪುರೈನಾ ಕ್ರಾಸಿಂಗ್ ಬಳಿಯಲ್ಲಿ ಬರುತ್ತಿದ್ದಂತೆಯೇ ಬಸ್ಸು ಕಾರಿಗೆ ಢಿಕ್ಕಿಯಾಗಿದೆ. ಇದರಿಂದಾಗಿ ಕಾರು ಮುಂದೆ ಚಲಿಸುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಘಟನೆಯಲ್ಲಿಐವರು ಮೃತಪಟ್ಟರೆ, ಕಾರಿನ ಚಾಲಕ, ಬಾಲಕಿ ಸೇರಿದಂತೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದುರ್ಘಟನೆಗೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.