accident in barmer : ಎಸ್​ಯುವಿ – ಟ್ರಕ್​ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 8 ಜನ ದುರ್ಮರಣ

ರಾಜಸ್ಥಾನ : accident in barmer : ಕಾರು ಮತ್ತೆ ಟ್ರಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬ 8 ಮಂದಿ ಸಾವನ್ನಪ್ಪಿದ ಘಟನೆಯು ರಾಜಸ್ಥಾನದ ಭಾಡ್​ಮೇರ್​ ಜಿಲ್ಲೆಯ ಗುಡಮಲಾನಿ ಮೆಗಾ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಮುಂದುವರಿದಿದೆ.


ಮದುವೆ ಕಾರ್ಯಕ್ರಮಕ್ಕೆಂದು ಒಂದು ಕುಟುಂಬದ ಹತ್ತು ಮಂದಿ ಎಸ್​ಯುವಿ ಕಾರಿನಲ್ಲಿ ಗುಡಮಲಾನಿಗೆ ತೆರಳಿದ್ದರು ಎನ್ನಲಾಗಿದೆ. ಮಾರ್ಗಮಧ್ಯದಲ್ಲಿ ಎಸ್​ಯುವಿ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ಭೀಕರತೆಗೆ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಾಲ್ಕು ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಇನ್ನಿಬ್ಬರನ್ನು ಸಂಚೋರ್​ನಲ್ಲಿರುವ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.


ಇನ್ನು ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಠಾಣೆಯ ಪೊಲೀಸ್​ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವಗಳನ್ನು ಹಸ್ತಾಂತರಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಮರಿಗೆ ಉರುಳಿದ ಬಸ್ : 22 ಸಾವು, 6 ಮಂದಿಗೆ ಗಾಯ

ಉತ್ತರಾಖಂಡ್ : ಯಮುನೋತ್ರಿಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಉತ್ತರಕಾಶಿ ಜಿಲ್ಲೆಯ ದಮ್ತಾ ಬಳಿ ಕಮರಿಗೆ‌ ಉರುಳಿದ ( bus falls into gorge) ಪರಿಣಾಮ ಕನಿಷ್ಠ 22 ಜನರು (22 dead) ಸಾವನ್ನಪ್ಪಿದ್ದು, 6 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಯಮುನೋತ್ರಿಗೆ 28 ​​ಯಾತ್ರಿಕರ ಚಾರ್ ಧಾಮ್ ಯಾತ್ರೆಯನ್ನು ಹೊತ್ತೊಯ್ಯುತ್ತಿತ್ತು. ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ಸ್ಥಳಕ್ಕೆ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ಭೇಟಿ ನೀಡಿದ್ದು, ರಕ್ಷಣಾ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ. ಯಮುನೋತ್ರಿ ಜೊತೆಗೆ ಬದರಿನಾಥ, ಕೇದಾರನಾಥ, ಗಂಗೋತ್ರಿಯ ಪುಣ್ಯಕ್ಷೇತ್ರಗಳನ್ನು ಸಾಮಾನ್ಯವಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ.

ಉತ್ತರಾಖಂಡ ಮುಖ್ಯಮಂತ್ರಿ ಕಚೇರಿಯ ಪ್ರಕಾರ, ಸಿಎಂ ಪುಷ್ಕರ್ ಸಿಂಗ್ ಧಾಮಿ ಉತ್ತರಕಾಶಿ ಜಿಲ್ಲೆಯಲ್ಲಿ ಬಸ್ ಅಪಘಾತಕ್ಕೆ ಸಂಬಂಧಿಸಿದಂತೆ ಡೆಹ್ರಾಡೂನ್‌ನ ವಿಪತ್ತು ನಿಯಂತ್ರಣ ಕೊಠಡಿಯನ್ನು ತಲುಪಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಜತೆಗೆ ಪರಿಹಾರ ಹಾಗೂ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಯಮುನೋತ್ರಿಗೆ ತೆರಳುತ್ತಿದ್ದ 28 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಉತ್ತರಕಾಶಿಯಲ್ಲಿ ಕಮರಿಗೆ ಬಿದ್ದ ಪರಿಣಾಮ 22 ಮಂದಿ ಸಾವನ್ನಪ್ಪಿದ್ದು, ಇದೀಗ ಮೃತರ ಕುಟುಂಬ ಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿಯವರ ಕಚೇರಿ ಭಾನುವಾರ ಘೋಷಿಸಿದೆ.

ಇದನ್ನು ಓದಿ : PSI Exams Scam : ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ : ಕಾನ್ಸ್ ಟೇಬಲ್ ಹರೀಶ್ ಬಂಧನ

ಇದನ್ನೂ ಓದಿ : Saurav Ganguly : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ : ಸ್ಪಷ್ಟನೆ ಕೊಟ್ಟ ಶಾ

accident in barmer truck and suv car 8 members of a family died

Comments are closed.