ಮಂಗಳೂರು : ಟ್ರಕ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನವದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ತೊಕ್ಕಟ್ಟಿನ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.

ಪ್ರಿಯಾ ಫೆರ್ನಾಂಡೀಸ್ ಹಾಗೂ ರಾಯನ್ ಫೆರ್ನಾಂಡಿಸ್ ಎಂಬವರೇ ಸಾವನ್ನಪ್ಪಿದ್ದ ದುರ್ದೈವಿಗಳು. ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ವೇಗವಾಗಿ ಬಂದ ಬೃಹತ್ ಟ್ರಕ್ ಬೈಕ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಲಾರಿಯ ಚಕ್ರದಡಿಯಲ್ಲಿ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.

ಪ್ರಿಯಾ ಫೆರ್ನಾಂಡೀಸ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೆ. ಗಂಭೀರವಾಗಿ ಗಾಯಗೊಂಡಿದ್ದ ರಾಯನ್ ಫೆರ್ನಾಂಡಿಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.

ಮಂಗಳೂರಿನ ಬಜಾಲ್ ಮೂಲದವರಾದ ರಾಯನ್ ಫರ್ನಾಂಡೀಸ್ ಕಳೆದ ಹತ್ತು ದಿನಗಳಿಂದ ಉಳ್ಳಾಲದ ಮಾಸ್ತಿಕಟ್ಟೆಯ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.