ಬೆಂಗಳೂರು : ನಟಿ ಚಂದನಾ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ದಿನೇಶ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್ ಮೇ 28 ರಂದು ನಟಿ ಚಂದನಾ ಸೆಲ್ಫೀ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಡಿಯೋದಲ್ಲಿ ಆರೋಪಿ ದಿನೇಶ್ ಮೇಲೆ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ : https://kannada.newsnext.live/chandran-actor-sucide-kannada-bangalore-cheet-lover/
ಆರೋಪಿ ದಿನೇಶ್ ನನ್ನು ಕಳೆದ ಐದು ವರ್ಷದಿಂದ ಸಂಜನಾ ಪ್ರೀತಿಸುತ್ತಿದ್ದಳು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ರೂಪಾಯಿ ಪಡೆದಿದ್ದಲ್ಲದೇ ದೈಹಿಕವಾಗಿ ಚಂದನಾಳನ್ನ ಬಳಸಿಕೊಂಡಿದ್ದ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರ ಅಸ್ವಸ್ಥಳಾಗಿದ್ದ ಚಂದನಾಳನ್ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು.