ಸೋಮವಾರ, ಏಪ್ರಿಲ್ 28, 2025
HomeCoastal NewsShambavi Lodge Udupi : ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ

Shambavi Lodge Udupi : ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಮತ್ತೊಂದು ಆತ್ಮಹತ್ಯೆ

- Advertisement -

ಉಡುಪಿ : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ಯನ್ನು ಚುರುಕುಗೊಳಿಸಿದ್ದಾರೆ. ಈ ನಡುವಲ್ಲೇ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ( Shambavi Lodge Udupi) ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು ಹೊರವಲಯದ ಕೊಣಾಜೆಯ ಮೆಡಿಕಲ್‌ ರೆಪ್‌ ಶರಣ್‌ ರಾಜ್‌ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ತಿಳಿದು ಬಂದಿದೆ. ಶರಣ್‌ ರಾಜ್‌ ನಿನ್ನೆ ರಾತ್ರಿ ಶಾಂಭವಿ ಲಾಡ್ಜ್‌ನ ಕೋಣೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಫಲ್ಯದಿಂದ ಶರಣ್‌ ರಾಜ್‌ ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂತೋಷ್‌ ಪಾಟೀಲ್‌ ಹಾಗೂ ಆತನ ಸ್ನೇಹಿತರು ಉಳಿದುಕೊಂಡಿದ್ದ ರೂಂನ್ನು ಗ್ರಾಹಕರಿಗೆ ನೀಡಲಾಗಿರಲಿಲ್ಲ. ಆದರೆ ಕಳೆದ ಎರಡು ದಿನಗಳ ಹಿಂದೆಯಷ್ಟೇ ಲಾಡ್ಜ್‌ನಲ್ಲಿ ಧಾರ್ಮಿಕ ಕಾರ್ಯವನ್ನು ನಡೆಸಿ ಹೆಸರನ್ನೂ ಕೂಡ ಬದಲಾಯಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸ್ಥಾನಕ್ಕೆ ಕೆ.ಎಸ್.‌ ಈಶ್ವರಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ : ಸಂತೋಷ್ ಪಾಟೀಲ್ ತಂಗಿದ್ದ ಹೊಟೇಲ್ ನಲ್ಲಿ ಏನಾಯ್ತು? ಇಲ್ಲಿದೆ Exclusive Details

ಇದನ್ನೂ ಓದಿ : ಸಂತೋಷ್‌ ಪಾಟೀಲ್‌ ಆತ್ಮಹತ್ಯೆ : ಸಚಿವ ಕೆ.ಎಸ್.‌ ಈಶ್ವರಪ್ಪ ವಿರುದ್ದ ಉಡುಪಿಯಲ್ಲಿ ಪ್ರಕರಣ ದಾಖಲು

After Santhosh Patil suicide another Suicide Case in Shambavi Lodge Udupi

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular