Aligarh Crime: ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ಡ್ರೆಸ್ಸಿಂಗ್ ಮಾಡಿ ಓಡಾಡುತ್ತಿದ್ದ ಪತ್ನಿಯನ್ನು ಕೊಂದೆ ಬಿಟ್ಟ ಪತಿರಾಯ

ಅಲಿಗಢ: (Aligarh Crime) ತನ್ನ ಪತ್ನಿಗೆ ಬೇರೆಯರೊಂದಿಗೆ ಅನೈತಿಕ ಸಂಬಂಧವಿದೆ ಎಂದು ಅಥವಾ ಇನ್ಯಾವುದೋ ಕಾರಣಕ್ಕೋ ಹೆಂಡತಿಗೆ ಹೊಡೆಯುವುದು ಕೊಲೆ ಮಾಡಿರುವುದನ್ನು ನಾವು ಕೇಳಿರುತ್ತೇವೆ. ಆದರೆ ಇಲ್ಲೋರ್ವ ವ್ಯಕ್ತಿ ತನ್ನ ಹೆಂಡತಿ ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ಡ್ರೆಸ್ಸಿಂಗ್‌ ಮಾಡಿಕೊಂಡು ಓಡಾಡುತ್ತಿದ್ದಕ್ಕೆ ಕೊಲೆ ಮಾಡಿರುವ ಘಟನೆ ನಡೆದಿದೆ. ಸಪ್ನಾ (28 ವರ್ಷ) ಎನ್ನುವಾಕೆ ಮೃತ ಮಹಿಳೆ.

ಹೌದು. ಸಪ್ನಾ ದಂಪತಿಗಳಿಗೆ ನಾಲ್ಕು ವರ್ಷದ ಮಗನಿದ್ದು, ಇಬ್ಬರು ಆಗಾಗ ಜಗಳವಾಡುತ್ತಿದ್ದರು. ಸಪ್ನಾ ಸಾರ್ವಜನಿಕ ಪ್ರದೇಶಗಳಲ್ಲಿ ಸನುಚಿತವಾಗಿ ಡ್ರೆಸ್ಸಿಂಗ್‌ ಮಾಡಿಕೊಂಡು ಓಡಾಡುತ್ತಿದ್ದಳು. ಈ ಕಾರಣಕ್ಕೆ ಆರೋಪಿ ಮೋಹಿತ್ ಕುಮಾರ್ ಕೋಪಗೊಂಡಿದ್ದನು. ಪದೇ ಪದೇ ಎಚ್ಚರಿಕೆ ನೀಡಿದರೂ ಪತ್ನಿ ಕಿವಿಗೊಡುತ್ತಿರಲಿಲ್ಲ. ಇದರಿಂದ ಆಕ್ರೋಶಗೊಂಡ ಆರೋಪಿ ಸಪ್ನಾಳ ಕತ್ತಿನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾನೆ.

ಬರ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ಗಾಜಿಪುರ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಘಟನೆಯ ಬಗ್ಗೆ ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಮೃತದೇಹದ ಪಕ್ಕದಲ್ಲಿ ಕುಮಾರ್ ಕುಳಿತಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಪ್ರಕರಣದ ಮೇಲೆ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಸರ್ಕಲ್ ಆಫೀಸರ್ ಸರ್ಜನಾ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ : Gang rape of girls: ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ : ಆರು ಮಂದಿ ಅರೆಸ್ಟ್‌

ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ : ಆರು ಮಂದಿ ಅರೆಸ್ಟ್‌

ಉತ್ತರ ಪ್ರದೇಶ: ಫತೇಪುರ್ ಜಿಲ್ಲೆಯ ಹುಸೇನಗುಂಜ್‌ನಲ್ಲಿ ಇಬ್ಬರು ಬಾಲಕಿಯರ ಮೇಲೆ ಆರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಸಿದ್ದಾರೆ. ಹುಡುಗಿಯರು ಜಾತ್ರೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ,” ಎಂದು ಹೇಳಿದ ಎಸ್ಪಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಾರ್ಚ್ 5 ರಂದು ಅಲಿಗಢ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನ ರೈಲ್ವೇ ನಿಲ್ದಾಣದ ಬಳಿ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ: 3 ತಿಂಗಳಲ್ಲಿ 3ನೇ ಘಟನೆ ಬೆಳಕಿಗೆ

ಇದನ್ನೂ ಓದಿ : Attempt to kidnap child: ಅಂಬೆಗಾಲಿಡುವ ಮಗುವನ್ನು ಅಪಹರಿಸಲು ಪ್ರಯತ್ನ: ವ್ಯಕ್ತಿ ಅರೆಸ್ಟ್

Aligarh Crime: Husband killed his wife who was walking around in public area by dressing improperly.

Comments are closed.