Aligarh Crime news: ಪತ್ನಿಯನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿರಾಯ

ಅಲಿಗಢ: (Aligarh Crime news) ಉತ್ತರ ಪ್ರದೇಶದ ಅಲಿಗಢ್‌ನ ರಟವಾಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದು ನಂತರ ತಾನೂ ಕೂಡ ನೇಣು ಬಿಗಿದುಕೊಂಡು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಯ ಹಿಂದಿನ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದು ನಂತರ ತಾನೂ ಕೂಡ ನೇಣು ಬಿಗಿದುಕೊಂಡು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಅಲಿಗಢ್‌ನ ರಟವಾಲಿ ಗ್ರಾಮದಲ್ಲಿ ಘಟನೆ ವರದಿಯಾಗಿದ್ದು, ಮಾಹಿತಿ ದೊರೆತ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ. ಪತಿ ಮೊದಲು ಪತ್ನಿಯನ್ನು ಕತ್ತು ಹಿಸುಕಿ ಸಾಯಿಸಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ದಂಪತಿಯ ಮನೆಯಿಂದ ಶವಗಳನ್ನು ಹೊರತೆಗೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಬಾರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕಾಪು: ಖಾಸಗಿ ಬಸ್‌ ಢಿಕ್ಕಿ: ಶಾಲಾ ಬಾಲಕಿಗೆ ಗಂಭೀರ ಗಾಯ

ಉಡುಪಿ: (Kapu bus accident) ಉಡುಪಿ ಸಮೀಪದ ಕಾಪುವಿನಲ್ಲಿ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್‌ ಒಂದು ಢಿಕ್ಕಿ ಹೊಡೆದಿದ್ದು, ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೆ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ( ೧೩ ವರ್ಷ) ಎಂಬಾಕೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿ. ಇಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ವರ್ಷಿತಾ ರಾಷ್ಟ್ರೀಯ ಹೆದ್ದಾರಿ ೬೬ರ ಮಂದಾರ ಹೋಟೆಲ್‌ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್‌ ಅತೀ ವೇಗದಿಂದ ಬಂದು ವಿದ್ಯಾರ್ಥಿನಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ವರ್ಷಿತಾಳ ತಲೆಗೆ ತೀವ್ರ ಗಾಯಗಳಾಗಿದ್ದು, ವರ್ಷಿತಾಳನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸರು ಬಸ್ಸನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ : Kapu bus accident: ಕಾಪು: ಖಾಸಗಿ ಬಸ್‌ ಢಿಕ್ಕಿ: ಶಾಲಾ ಬಾಲಕಿಗೆ ಗಂಭೀರ ಗಾಯ

Aligarh Crime news: Husband killed his wife by strangling her and then committed suicide

Comments are closed.