Amritsar bus accident : ಆಳವಾದ ಕಂದಕಕ್ಕೆ ಉರುಳಿದ ಬಸ್‌ : 10 ಮಂದಿ ಸಾವು, ಹಲವರಿಗೆ ಗಾಯ

ಅಮೃತಸರ : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮವಾಗಿ (Amritsar bus accident) ಹತ್ತು ಮಂದಿ ಸಾವನ್ನಪ್ಪಿದ್ದಾರೆಂದು ಅನುಮಾನಿಸಲಾಗಿದೆ. ಅಷ್ಟೇ ಅಲ್ಲದೇ ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತವು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ಅಮೃತಸರದಿಂದ ಕತ್ರಾಕ್ಕೆ ಪ್ರಯಾಣಿಕರನ್ನು ಹೊಯ್ತು ತೆರಳುತ್ತಿದ್ದ ಬಸ್ ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುತ್ತದೆ. ಇದರ ಪರಿಣಾಮವಾಗಿ ಅಪಘಾತದಲ್ಲಿ ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದು, ಹತ್ತರಿಂದ ಹನ್ನೆರಡು ಜನ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.

ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ಸಿಆರ್‌ಪಿಎಫ್, ಪೊಲೀಸರು ಮತ್ತು ಇತರ ತಂಡಗಳನ್ನು ಒಳಗೊಂಡ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕೇಂದ್ರ ಮೀಸಲು ಪೊಲೀಸ್ ಪೋರ್ಸ್ (ಸಿಆರ್‌ಪಿಎಫ್) ಸಹಾಯಕ ಕಮಾಂಡೆಂಟ್ ಅಶೋಕ್ ಚೌಧರಿ ಹೇಳಿದ್ದಾರೆ. ಇನ್ನೂ ಹೆಚ್ಚಿನ ಜನರು ಬಸ್‌ನಡಿ ಸಿಲುಕಿಕೊಂಡಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಕ್ರೇನ್‌ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : Mysore accident : ಮೈಸೂರು ಅಪಘಾತದಲ್ಲಿ 10 ಮಂದಿ ಸಾವು : ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

“ಆಂಬ್ಯುಲೆನ್ಸ್‌ಗಳನ್ನು ಕರೆಯಲಾಯಿತು ಮತ್ತು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಮೃತದೇಹಗಳನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ಸಿನಡಿಯಲ್ಲಿ ಯಾರಾದರೂ ಸಿಕ್ಕಿಹಾಕಿಕೊಂಡಿದ್ದಾರೆಯೇ ಎಂದು ನೋಡಲು ಕ್ರೇನ್ ಅನ್ನು ಇಲ್ಲಿಗೆ ತರಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ”ಎಂದು ಚೌಧರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

Amritsar bus accident: Bus fell into a deep ditch: 10 dead, many injured

Comments are closed.