ಸೋಮವಾರ, ಏಪ್ರಿಲ್ 28, 2025
HomeCrimeAssam gang rape: ಕೈ ಕಾಲುಗಳನ್ನು ಕಟ್ಟಿಹಾಕಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ:...

Assam gang rape: ಕೈ ಕಾಲುಗಳನ್ನು ಕಟ್ಟಿಹಾಕಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಅರೆಸ್ಟ್

- Advertisement -

ಅಸ್ಸಾಂ: (Assam gang rape) ಅಪ್ರಾಪ್ತ ಬಾಲಕಿಯ ಕೈ ಕಾಲುಗಳನ್ನು ಕಟ್ಟಿಹಾಕಿ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ನಡೆದಿದೆ. ಇದೀಗ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎಂದು ಗುರುತಿಸಲಾಗಿದೆ

ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎನ್ನುವ ಇಬ್ಬರು ಕಾಮುಕರು ಹನ್ನೆರಡು ವರ್ಷದ ಬಾಲಕಿಯ ಕೈಕಾಲುಗಳನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮೂರು ದಿನಗಳಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿ ಅಥಾಬರಿ ಚಹಾ ತೋಟದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ದಿಬ್ರುಗಢ ಎಸ್ಪಿ ಶ್ವೇತಾಂಕ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿ ಅಥಾಬರಿ ಚಹಾ ತೋಟದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ” ಎಂದು ಅಧಿಕಾರಿಗಳು ತಿಳಿಸಿದ್ದು, ಆರೋಪಿಗಳ ವಿರುದ್ಧ 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

“ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದೆ ಮತ್ತು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಅವಳು ಫೆಬ್ರವರಿ 3 ರಿಂದ ನಾಪತ್ತೆಯಾಗಿದ್ದಳು. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, 2012 ರ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Sexual assault on girl: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಕರಾಟೆ ತರಬೇತುದಾರನಿಗೆ 10 ವರ್ಷ ಜೈಲು ಶಿಕ್ಷೆ

ಇದನ್ನೂ ಓದಿ : Turkey Building collapse: ಭೂಕಂಪನಕ್ಕೆ ಕುಸಿದ 34 ಕಟ್ಟಡ: 10 ಮಂದಿ ಸಾವು

ಇದೀಗ ಪ್ರಕರಣದ ಕುರಿತು ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Assam gang rape: Gang rape of 14-year-old girl with hands and legs tied: Two arrested

RELATED ARTICLES

Most Popular