Attack on Indians holding flag: ಖಲಿಸ್ತಾನಿಯರ ಅಟ್ಟಹಾಸ: ಆಸ್ಟ್ರೇಲಿಯಾದಲ್ಲಿ ತ್ರಿವರ್ಣ ಧ್ವಜ ಹಿಡಿದ ಭಾರತೀಯರ ಮೇಲೆ ಹಲ್ಲೆ, ವಿಡಿಯೋ ವೈರಲ್‌

ಸಿಡ್ನಿ: (Attack on Indians holding flag) ಆಸ್ಟ್ರೇಲಿಯಾದಲ್ಲಿ ತ್ರಿವರ್ಣ ಧ್ವಜ ಹಿಡಿದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆ ವೇಳೆ ಐವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಕ್ಟೋರಿಯಾ ಪೊಲೀಸರು ದಾಳಿಯನ್ನು ಖಂಡಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಖಲಿಸ್ತಾನಿ ಧ್ವಜವನ್ನು ಬೀಸುತ್ತಿದ್ದ ಗುಂಪೊಂದು ತ್ರಿವರ್ಣ ಧ್ವಜವನ್ನು ಹಿಡಿದ ಭಾರತೀಯರ ಮೇಲೆ ದಾಳಿ ನಡೆಸಿದೆ. ಅಲ್ಲದೇ ಖಲಿಸ್ತಾನಿ ಪರದ ತಂಡ ರಾಡ್‌ ಗಳನ್ನು ಹಿಡಿದು ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೇ ಸಂಘರ್ಷದ ವೇಳೆ ಭಾರತೀಯರ ಕೈಯಲ್ಲಿದ್ದ ತ್ರಿವರ್ಣ ಧ್ವಜವನ್ನು ರಸ್ತೆಗೆ ಎಸೆದಿದ್ದಾರೆ.

ಘಟನೆಯ ವೇಳೆ ಐವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಈ ದಾಳಿಯನ್ನು ವಿಕ್ಟೋರಿಯಾ ಪೊಲೀಸರು ಖಂಡಿಸಿದ್ದು, ಹಿಂಸಾತ್ಮಕ ದಾಳಿಯ ನಂತರದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳನ್ನು ಕೆಲವು ದಿನಗಳ ಹಿಂದೆ ಧ್ವಂಸಗೊಳಿಸಲಾಗಿತ್ತು. ಮೆಲ್ಬೋರ್ನ್‌ ನಲ್ಲಿ ಕಳೆದ ಕೆಲವು ವಾರಗಳಲ್ಲಿ ಖಲಿಸ್ತಾನ್‌ ಪರ ಹಾಗೂ ಭಾರತ ವಿರೋಧಿ ಘೋಷಣೆಗಳಿಂದ ಮೂರು ದೇವಾಲಯಗಳನ್ನು ವಿರೂಪಗೊಳಿಸಲಾಗಿತ್ತು. ಅದರ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಭಾರತೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್ನೂ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ತೀವ್ರ ಆಕ್ರೋಶ ಕೇಳಿ ಬರುತ್ತಿದೆ. ನಿಜೆಪಿ ಮುಖಂಡ ಮಂಜಿಂದರ್‌ ಸಿಂಗ್‌ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಸಮಾಜ ವಿರೋಧಿ ಚಟುವಟಿಕೆಯನ್ನು ಎದುರಿಸಬೇಕು ಎಂಬುದಾಗಿ ಬರೆದುಕೊಂಡಿದ್ದಾರೆ. ” ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರು ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ಖಂಡಿಸುತ್ತೇನೆ. ಈ ಚಟುವಟಿಕೆಗಳಿಂದ ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ : Balochistan Bus accident: ಕಂದಕಕ್ಕೆ ಉರುಳಿದ‌ ಪ್ರಯಾಣಿಕರ ಬಸ್‌ : 39 ಸಾವು

ಇದನ್ನೂ ಓದಿ : Strange incident-man died: ವಿಚಿತ್ರ ಘಟನೆ: ಮಾಲೀಕನನ್ನೆ ಗುಂಡು ಹಾರಿಸಿ ಕೊಂದ ನಾಯಿ

Attack on Indians holding flag: Khalistani’s outrage: Attack on Indians holding tricolor flag in Australia, video viral

Comments are closed.