Attempt to suicide: ಹಿರಿಯ ವಿದ್ಯಾರ್ಥಿಗಳಿಂದ ಕಿರುಕುಳ: ಬೇಸತ್ತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಹೈದರಾಬಾದ್: (Attempt to suicide) ತೆಲಂಗಾಣದ ವಾರಂಗಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ತನ್ನ ಹಿರಿಯ ವೈದ್ಯಕೀಯ ವಿದ್ಯಾರ್ಥಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ಆಕೆಯನ್ನು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾರಂಗಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ಅನಸ್ತೇಷಿಯಾ ವಿಭಾಗದ ಎರಡನೇ ವರ್ಷದ (ಎಂಡಿ) ವಿದ್ಯಾರ್ಥಿನಿ ಮತ್ತು ವೈದ್ಯರು ಕೀಳಾಗಿ ನೋಡುತ್ತಿದ್ದು, ಕಿರುಕುಳ ನೀಡುವ ಕಾಮೆಂಟ್‌ ಗಳನ್ನು ಮಾಡುತ್ತಿದ್ದರು. ಅಲ್ಲದೇ ಇನ್‌ಸ್ಟಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಗ್ರೂಪ್‌ಗಳಲ್ಲಿ ಮಹಿಳೆಯ ವಿರುದ್ಧ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ್ದಾರೆ. ಈ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯನ್ನು ಸಿಬ್ಬಂದಿ ಮತ್ತು ವೈದ್ಯರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಮೌಖಿಕವಾಗಿ ಅಥವಾ ಇಂಟ್ರಾವೆನಸ್ ಮೂಲಕ ಯಾವುದೋ ಔಷಧ ತೆಗದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದೀಗ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ಆಕೆಯನ್ನು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈಗ ಆಕೆಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿರಿಯ ವಿದ್ಯಾರ್ಥಿಯೊಬ್ಬ ತನ್ನ ಮಗಳಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿನಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವಾರಂಗಲ್ ಪೊಲೀಸ್ ಆಯುಕ್ತ ಎ ವಿ ರಂಗನಾಥ್ ಪಿಟಿಐಗೆ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : Student raped by Friends: ನರ್ಸಿಂಗ್‌ ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸ್ನೇಹಿತರಿಂದಲೇ ಅತ್ಯಾಚಾರ: ಅರೋಪಿಗಳು ಅರೆಸ್ಟ್‌

ಇದನ್ನೂ ಓದಿ : Women murder: ಮಹಿಳೆಯ ಕೊಲೆಗೈದು ಫೇಸ್ ಬುಕ್ ಲೈವ್ ಬಂದ ಪಾಗಲ್ ಪ್ರೇಮಿ

ಇದನ್ನೂ ಓದಿ : Raping Woman Cop: ಮಹಿಳಾ ಪೋಲೀಸ್ ಮೇಲೆ ಅತ್ಯಾಚಾರ ಆರೋಪ: ಗಡಿ ಪಡೆ ಇನ್ಸ್ ಪೆಕ್ಟರ್ ಅಮಾನತು

“ನಾವು ಇದನ್ನು ಆತ್ಮಹತ್ಯೆ ಯತ್ನ ಎಂದು ಭಾವಿಸುತ್ತೇವೆ ಮತ್ತು ಹೆಚ್ಚಿನ ತನಿಖೆಯ ಆಧಾರದ ಮೇಲೆ ನಿಖರವಾದ ಕಾರಣಗಳು ತಿಳಿಯಲ್ಪಡುತ್ತವೆ. ಅವಳು ಚೇತರಿಸಿಕೊಂಡ ನಂತರ, ಪೊಲೀಸರು ಹೆಚ್ಚಿನ ವಿವರಗಳನ್ನು ಪಡೆಯುತ್ತಾರೆ ಮತ್ತು ಮುಂದಿನ ಕ್ರಮದ ಯೋಜನೆ ಅದರ ಮೇಲೆ ಅವಲಂಬಿತವಾಗಿರುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Attempt to suicide: Harassment by senior students: Bored medical student attempts to commit suicide

Comments are closed.